ಹೋರಾಟಗಾರ ನವ್ಲಾಖಾ ವಿರುದ್ಧ ಯಾವುದೇ ಅಪರಾಧ ಮೇಲ್ನೋಟಕ್ಕೆ ಕಂಡುಬಂದಿಲ್ಲ: ಹೈಕೋರ್ಟ್

Update: 2019-06-12 17:12 GMT

ಮುಂಬೈ, ಜೂ. 12: ಮಾವೋವಾದಿ ನಂಟು ಇದೆಯೆಂದು ಆರೋಪಿಸಲಾದ ನಾಗರಿಕ ಹಕ್ಕು ಹೋರಾಟಗಾರ ಗೌತಮ್ ನವ್ಲಾಖಾ ವಿರುದ್ಧ ಯಾವುದೇ ಅಪರಾಧ ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಬುಧವಾರ ಬಾಂಬೆ ಹೈಕೋರ್ಟ್ ಹೇಳಿದೆ. ನವ್ಲಾಖಾಗೆ ಬಂಧನದಿಂದ ರಕ್ಷಣೆ ನೀಡಿರುವುದನ್ನು ನ್ಯಾಯಾಲಯ ಮುಂದಿನ ವಿಚಾರಣೆ ವರೆಗೆ ವಿಸ್ತರಿಸಿದೆ.

ಪುಣೆಯ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ಹಿಂಸಾಚಾರ ಉದ್ಭವಿಸಲು 2017 ಡಿಸೆಂಬರ್ 31ರಂದು ನಡೆದ ಎಲ್ಗಾರ್ ಪರಿಷತ್‌ನ ಸಮಾವೇಶ ಕಾರಣವಾಗಿದೆ ಎಂದು ಆರೋಪಿಸಿ ಪುಣೆ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ನವ್ಲಾಖಾ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ರಂಜಿತ್ ಮೋರೆ ಹಾಗೂ ಭಾರತಿ ದಾಂಗ್ರೆ ಅವರನ್ನು ಒಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ನವ್ಲಾಖಾ ಹಾಗೂ ಇತರ ನಾಲ್ವರು ಆರೋಪಿಗಳಿಗೆ ಮಾವೋವಾದಿಗಳ ನಂಟು ಇದೆ ಎಂದು ಪೊಲೀಸರು ಆರೋಪಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News