ಮಂಗಳೂರು ಏರ್‌ಪೋರ್ಟ್‌ನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಪೇಸ್ಟ್ ವಶ

Update: 2019-06-12 17:23 GMT

ಮಂಗಳೂರು, ಜೂ.12: ಮಂಗಳೂರು ವಿಮಾನ ನಿಲ್ದಾಣ ಮೂಲಕ ಕಳ್ಳ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಎರಡು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಿ, 25.85 ಲಕ್ಷ ರೂ. ಮೊತ್ತದ ಚಿನ್ನದ ಪೇಸ್ಟ್‌ನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮೂಲದ 24 ಕ್ಯಾರೆಟ್ ಶುದ್ಧ ಚಿನ್ನದ 131.700 ಗ್ರಾಂ ತೂಕದ ಪೌಡರ್/ ಪೇಸ್ಟ್ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಪತ್ತೆಹಚ್ಚಿ, ಆತನಿಂದ 4.37 ಲಕ್ಷ ರೂ. ಮೊತ್ತ ಚಿನ್ನ ವಶಪಡಿಸಿಕೊಳ್ಳಲಾಗಿದೆ.

‘ಆರೋಪಿಯು ಏರ್ ಇಂಡಿಯಾ ವಿಮಾನ ಮೂಲಕ ದುಬೈಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ. ಆತನನ್ನು ಬಂಧಿಸಲಾಗಿದೆ’ ಎಂದು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ‘ಟ್ವೀಟ್’ ಮಾಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಪ್ರಯಾಣಿಕನೊಬ್ಬ 21.48 ಲಕ್ಷ ರೂ. ಮೊತ್ತದ 647 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧ ಚಿನ್ನದ ಪೇಸ್ಟ್‌ನ್ನು ತಾನು ಧರಿಸಿದ್ದ ಜೀನ್ಸ್ ಪ್ಯಾಂಟಿನ ಮಣಿಗಂಟಿನ ಭಾಗದ ಒಳಗೆ ಹೊಲಿದು ಕಳ್ಳ ಸಾಗಾಟ ಮಾಡುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ, ಚಿನ್ನದ ಪೇಸ್ಟ್ ವಶಪಡಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News