ಬಿಟಿಎಸ್ ರಸ್ತೆಯ ಸ್ಟೀಲ್ ಬ್ರಿಡ್ಜ್ ಕಾಮಗಾರಿಗೆ ವಿರೋಧ: ಸ್ಥಳೀಯರಿಂದ ಪ್ರತಿಭಟನೆ

Update: 2019-06-12 18:26 GMT

ಬೆಂಗಳೂರು, ಜೂ.12: ಬಿಟಿಎಸ್ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿ ನಡೆಸಬಾರದು ಎಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.

ಬುಧವಾರ ನಗರದ ವಿಲ್ಸನ್ ಗಾರ್ಡನ್ ಬಳಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸ್ಥಳೀಯ ನಿವಾಸಿ ರಾಮಣ್ಣ, 40 ಅಡಿ ಅಗಲವಿರುವ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿ ನಡೆಸಿದರೆ ಮನೆಗಳು ಹಾಗೂ ಮರಗಳನ್ನು ತೆರವುಗೊಳಿಸುವ ಅಪಾಯವಿದೆ. ಇದರಿಂದ ಸ್ಥಳೀಯ ನಿವಾಸಿಗಳಿಗೆ ಹೆಚ್ಚು ತೊಂದರೆಯಾಗಲಿದೆ. ಹೀಗಾಗಿ ಬಿಟಿಎಸ್ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಬದಲು ಶಾಂತಿನಗರ ಬಸ್ ನಿಲ್ದಾಣದಿಂದ ಲಾಲ್‌ಬಾಗ್ ರಸ್ತೆವರೆಗೆ ಬದಲಿಸಿ ಎಂದು ಆಗ್ರಹಪಡಿಸಿದರು.

ಇನ್ನು, ಲಾಲ್‌ಬಾಗ್ ರಸ್ತೆಯಲ್ಲಿ ಸುಮಾರು 300 ಅಡಿಗಳಷ್ಟು ರಸ್ತೆ ಇದೆ. ಇಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿ ನಡೆಸಿದರೆ ಯಾರಿಗೂ ತೊಂದರೆ ಆಗುವುದಿಲ್ಲ. ಆದರೆ 40 ಅಡಿಗಳಷ್ಟು ಇರುವ ಬಿಟಿಎಸ್ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ಕಾಮಗಾರಿ ಕೈಗೆತ್ತಿಕೊಂಡಿರುವುದು ಅವೈಜ್ಞಾನಿಕವಾಗಿದೆ. ಈಗಾಗಲೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News