ಸರಕಾರದ ಒಳ್ಳೆಯ ಕೆಲಸಕ್ಕೆ ಮಾಧ್ಯಮಗಳು ಪ್ರಚಾರ ನೀಡುತ್ತಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-06-13 12:36 GMT

ಬೆಂಗಳೂರು, ಜೂ. 13: ‘ಬ್ಯಾಂಕುಗಳಿಂದ ಆದ ಲೋಪದೋಷಕ್ಕೆ ಸರಕಾರವನ್ನು ಟೀಕಿಸುವ ಮಾಧ್ಯಮಗಳು ಮೈತ್ರಿ ಸರಕಾರದ ಒಳ್ಳೆಯ ಕೆಲಸವನ್ನು ಪ್ರಚಾರ ಮಾಡುವ ಹೃದಯ ವೈಶಾಲ್ಯತೆ ಬೆಳೆಸಿಕೊಂಡಿಲ್ಲ’ ಎಂದು ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಗುರುವಾರ ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲಮನ್ನಾ ವಿಷಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅತ್ಯಂತ ಪಾರದರ್ಶಕವಾಗಿ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ರೈತರ ಹೆಸರಿನಲ್ಲಿ ಹಣ ದುರುಪಯೋಗವಾಗಬಾರದೆಂಬ ಕಾರಣಕ್ಕಾಗಿ ನೇರವಾಗಿ ರೈತರ ಖಾತೆಗೆ ಹಣ ಒದಗಿಸಲಾಗುತ್ತಿದೆ. ಆದರೆ, ಕೆಲ ಬ್ಯಾಂಕುಗಳಿಂದ ಆದ ಲೋಪಕ್ಕೆ ಮಾಧ್ಯಮಗಳು ಸರಕಾರದ ವಿರುದ್ಧ ಟೀಕೆ ಮಾಡುತ್ತಿವೆ ಎಂದು ಆಕ್ರೋಶ ಹೊರಹಾಕಿದರು.

ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಜನರಿಗೆ ಅನುಕೂಲ ಕಲ್ಪಿಸಲು ಭೂ ಬದಲಾವಣೆ ಮತ್ತು ಕಟ್ಟಡ ನಕ್ಷೆ ಅನುಮೋದನೆಗೆ ದೇಶದಲ್ಲೆ ಪ್ರಥಮ ಬಾರಿಗೆ ಆನ್‌ಲೈನ್ ವ್ಯವಸ್ಥೆ ಜಾರಿಗೆ ತಂದಿದೆ. ಸಾಲಮನ್ನಾ ಸೇರಿದಂತೆ ಸರಕಾರದ ಇಂತಹ ಒಳ್ಳೆಯ ಕಾರ್ಯಗಳಿಗೆ ಮಾಧ್ಯಮಗಳು ಪ್ರಚಾರ ನೀಡುವಂತಹ ಹೃದಯ ವೈಶಾಲ್ಯತೆ ಬೆಳೆಸಿಕೊಳ್ಳಬೇಕು ಎಂದು ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News