×
Ad

ಜೂ.14ರಂದು ಉಡುಪಿ ಎಸ್ಪಿ ನೇರ ಫೋನ್ ಇನ್

Update: 2019-06-13 18:57 IST

ಉಡುಪಿ, ಜೂ.13: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಅವರ ನೇರ ಫೋನ್ ಇನ್ ಕಾರ್ಯಕ್ರಮ ಜೂ.14ರಂದು ಬೆಳಗ್ಗೆ 10 ಗಂಟೆಯಿಂದ 11ಗಂಟೆಯವರೆಗೆ ಬನ್ನಂಜೆಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆಯಲಿದೆ.

ಸಾರ್ವಜನಿಕರು ಸ್ಥಿರ ದೂರವಾಣಿ ಸಂಖ್ಯೆ 0820-2534777ಕ್ಕೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು. ಕಾರ್ಯಕ್ರಮಕ್ಕೆ ಕರೆ ಮಾಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News