ಮಕ್ಕಳಿಗೆ ಸಂಸ್ಕೃತಿಯ ಅರಿವು ಅಗತ್ಯ: ಉದಯ ಶೆಟ್ಟಿ ಮುನಿಯಾಲು

Update: 2019-06-13 13:28 GMT

ಹೆಬ್ರಿ, ಜೂ.13: ಭಕ್ತಿಯ ಮಾರ್ಗದಿಂದ ಮುಕ್ತಿ ಸಾಧ್ಯ. ಆದುದರಿಂದ ಬಂಟ ಸಮಾಜದ ಪ್ರತಿಯೊಬ್ಬರು ತಮ್ಮ ಮಕ್ಕಳೊಂದಿಗೆ ಧಾರ್ಮಿಕ ಕಾರ್ಯಕ್ರಮ ಗಳಲ್ಲಿ ಪಾಲ್ಗೊಂಡು ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿಯ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಹೆಬ್ರಿ ಅಜೆಕಾರು ವಲಯ ಬಂಟರ ಸಂಘದ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು ಹೇಳಿದ್ದಾರೆ.

ಹೆಬ್ರಿ ಅಜೆಕಾರು ವಲಯದ ಬಂಟರ ಯಾನೆ ನಾಡವರ ಸಂಘದ ಆಶ್ರಯ ದಲ್ಲಿ ಹೆಬ್ರಿ ಶ್ರೀಮತಿ ಶೀಲಾ ಸುಬೋಧ ಬಲ್ಲಾಳ್ ಬಂಟರ ಭವನದಲ್ಲಿ ಇತ್ತೀಚೆಗೆ ದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನೀಡಿದ 50000 ರೂ. ಸಹಾಯಧನವನ್ನು ಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡುತಿದ್ದರು.

ಸಂಘದ ಗೌರವಾಧ್ಯಕ್ಷ ರಮಾನಂದ ಹೆಗ್ಡೆ, ಉಪಾಧ್ಯಕ್ಷರಾದ ವಾದಿರಾಜ್ ಶೆಟ್ಟಿ, ಹರ್ಷ ಶೆಟ್ಟಿ, ನಿರ್ಮಾಲ ಎಸ್.ಹೆಗ್ಡೆ, ಮಾತೃ ಸಂಘದ ನಿರ್ದೇಶಕ ಬಿ. ಕರುಣಾಕರ ಶೆಟ್ಟಿ, ಮಾಹಿಳಾ ಬಂಟರ ಸಂಘದ ಕಾರ್ಯದರ್ಶಿ ಜ್ಯೋತಿ ಕೆ.ಶೆಟ್ಟಿ, ಕೃಷ್ಣ ಶೆಟ್ಟಿ, ರತ್ನಾಕರ ಶೆಟ್ಟಿ, ಪ್ರಕಾಶ್ ಶೆಟ್ಟಿ, ರಾಜೇಶ್ವರಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಸೀತಾನದಿ ವಿಠ್ಠಲ ಶೆಟ್ಟಿ ಸ್ವಾಗತಿಸಿದರು. ನಿತ್ಯಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂತೋಷ ಕುಮಾರ್ ಶೆಟ್ಟಿ ಮುದ್ರಾಡಿ ವಂದಿಸಿದರು. ಬಳಿಕ ಸಂಘದ ಸದಸ್ಯರಿಂದ ಭಜನೆ, ಸತ್ಯನಾರಾ ಯಣ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News