ಯುವತಿ ನಾಪತ್ತೆ
Update: 2019-06-13 21:53 IST
ಉಡುಪಿ, ಜೂ.13: ಉದ್ಯಾವರ ಕೊರಂಗ್ರಪಾಡಿ ನಿವಾಸಿ ಅಪ್ಪುಪುತ್ರನ್ ಎಂಬವರ ಮಗಳು ಪೂಜಾ (19) ಎಂಬಾಕೆ ಜೂ.12ರಂದು ಮಧ್ಯಾಹ್ನ 12:30ರ ಸುಮಾರಿಗೆ ಮನೆಯಿಂದ ಕಂಪ್ಯೂಟರ್ ಕ್ಲಾಸ್ ಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾಳೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.