ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಖಂಡಿಸಿ ಪ್ರತಿಭಟನೆ

Update: 2019-06-13 17:24 GMT

ಬೆಂಗಳೂರು, ಜೂ.13: ಗುಂಡ್ಲುಪೇಟೆ ತಾಲೂಕಿನ ವಿರನಕಟ್ಟೆಗೇಟ್ ಬಳಿ ದಲಿತ ವ್ಯಕ್ತಿಯ ಯುವಕನ ಮೇಲೆ ಮತ್ತು ಬೆತ್ತಲೆ ಮಾಡಿ ಹಲ್ಲೆ ನಡೆಸಿರುವ ಘಟನೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.

ಗುರುವಾರ ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಜಮಾಯಿಸಿದ ಸದಸ್ಯರು, ಈ ಪ್ರಕರಣದಲ್ಲಿ ಜಿಲ್ಲಾಡಳಿತ ವರಿಷ್ಠಾಧಿಕಾರಿಗಳನ್ನು ನೇರ ಹೊಣೆಯಾಗಿಸಿ ಸರಕಾರ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಡಾ.ಎಂ. ವೆಂಕಟಸ್ವಾಮಿ, ದೇಶದಲ್ಲಿ ಇಂದಿಗೂ ದಲಿತರ ಮೇಲೆ ಹಲ್ಲೆ ಮತ್ತು ದೌರ್ಜನ್ಯದಂಥ ಪ್ರಕರಣಗಳು ನಡೆಯುತ್ತಲೇ ಇವೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲೂಕಿನ ವಿರನಕಟ್ಟೆಗೇಟ್ ಬಳಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ, ಬೆತ್ತಲೆಗೊಳಿಸಿದ್ದು, ಘಟನೆ ನಡೆದು 1 ವಾರವಾಗಿದ್ದರೂ ತಾಲೂಕು ಆಡಳಿತ ಅಥವಾ ಜಿಲ್ಲಾಡಳಿತ ಇದುವರೆಗೂ ಯಾವುದೇ ಕ್ರಮ ಕೈಕೊಂಡಿಲ್ಲ ಎಂದು ಆರೋಪಿಸಿದರು.

ಪ್ರಕರಣದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಹಲ್ಲೆಗೊಳಗಾದ ಯುವಕನಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು. ಕನಿಷ್ಠ 20 ಲಕ್ಷ ರೂ. ಪರಿಹಾರ ಕೊಡಬೇಕು. ಮುಂದಿನ ದಿನಗಳಲ್ಲಿ ಸರಕಾರ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News