ಬಿಡಿಎಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

Update: 2019-06-13 17:36 GMT

ಬೆಂಗಳೂರು, ಜೂ.13: ಬಿಡಿಎ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳನ್ನು 330 ಕೋಟಿ ವೆಚ್ಚದಲ್ಲಿ ನವೀಕರಣ ಮತ್ತು ಪುನರ್ ನಿರ್ಮಾಣ ಮಾಡುವ ಪ್ರಸ್ತಾವಕ್ಕೆ ತಡೆ ನೀಡಬೇಕೆಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಬಿಡಿಎಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಜಿ.ಎಂ.ಪಾಳ್ಯದ ಹಿರಿಯ ನಾಗರಿಕ ನೆಲ್ಲೀರ ಎಂ. ಸುಬ್ಬಯ್ಯ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ, 2019ರ ಜು.5ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಬಿಡಿಎಗೆ ನಿರ್ದೇಶಿಸಿದೆ.

ಆಕ್ಷೇಪಣೆ ಏನು: ಬಿಡಿಎ ವ್ಯಾಪ್ತಿಯಲ್ಲಿ 68 ಲೇಔಟ್‌ಗಳಿವೆ. ಇಲ್ಲಿನ ವಾಣಿಜ್ಯ ಮಳಿಗೆಗಳನ್ನು ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ 330 ಕೋಟಿ ವೆಚ್ಚದಲ್ಲಿ ನವೀಕರಿಸುವ ಪ್ರಸ್ತಾವದ ಹಿಂದೆ ಪ್ರಭಾವಿ ಶಕ್ತಿಗಳ ಕೈವಾಡವಿದೆ ಎಂಬುದು ಅರ್ಜಿದಾರರ ಆರೋಪ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News