ಲೋಕಾಯುಕ್ತರ ಭೇಟಿ: ದೂರು ಸ್ವೀಕಾರ
ಮಂಗಳೂರು, ಜೂ.14: ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ದ.ಕ. ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಜೂ.17ರಂದು ಪೂರ್ವಾಹ್ನ 11ರಿಂದ ಅಪರಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿ, ಅಪರಾಹ್ನ 3ರಿಂದ 4:30ರವರೆಗೆ ಬಂಟ್ವಾಳ ತಾಲೂಕು ಕಚೇರಿ, ಜೂ.18ರಂದು ಪೂರ್ವಾಹ್ನ 11ರಿಂದ ಅಪರಾಹ್ನ 1 ಗಂಟೆಯವರೆಗೆ ಮೂಡುಬಿದಿರೆ ತಹಶೀಲ್ದಾರ್‌ರ ಕಚೇರಿ, ಅಪರಾಹ್ನ 3ರಿಂದ 4:30ರವರೆಗೆ ಮಂಗಳೂರು ತಾಲೂಕು ಕಚೇರಿ ದೂರುಗಳನ್ನು ಸ್ವೀಕರಿಸಲಾಗುತ್ತದೆ.
ಜೂ.20ರಂದು ಪೂರ್ವಾಹ್ನ 11ರಿಂದ ಅಪರಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ, ಜೂ.21ರಂದು ಪೂರ್ವಾಹ್ನ 11ರಿಂದ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿಗೆ ಭೇಟಿ ನೀಡಲಿದ್ದಾರೆ.
ಅಲ್ಲದೆ, ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: ಪೊಲೀಸ್ ಅಧೀಕ್ಷಕರ ಕಚೇರಿ- 0824- 2429197, 9448390987, ಪೊಲೀಸ್ ಉಪಾಧೀಕ್ಷಕರ ಕಚೇರಿ- 0824- 2453420, 9886542369, ಪೊಲೀಸ್ ನಿರೀಕ್ಷಕರ ಕಚೇರಿ- 0824- 2427237, 8861688100, 9448530051, 9449044377ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.