ದ.ಕ. ಜಿಲ್ಲಾ ವಾರ್ತಾಧಿಕಾರಿ ವರ್ಗಾವಣೆ
Update: 2019-06-14 18:32 IST
ಮಂಗಳೂರು, ಜೂ.14: ದ.ಕ. ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಯನ್ನಾಗಿ ಬೆಂಗಳೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಅವರನ್ನು ದ.ಕ. ಜಿಲ್ಲೆಯ ಪ್ರಭಾರವನ್ನು ಹೆಚ್ಚುವರಿಯಾಗಿ ವಹಿಸಲಾಗಿದ್ದು, ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.