ಶಿಕ್ಷಣ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ರೋಷನ್‌ ಬೇಗ್

Update: 2019-06-14 14:28 GMT

ಬೆಂಗಳೂರು, ಜೂ. 14: ಐ ಮಾನಿಟರಿ ಅಡ್ವೈಸರಿ(ಐಎಂಎ) ಕಂಪೆನಿ ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಿಂದ ದೂರ ಉಳಿದಿದ್ದ ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್ ಬೇಗ್, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡರು.

ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಒಂದು ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ಮತ್ತು ನೂರು ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಾರಂಭ ಕಾರ್ಯಕ್ರಮದಲ್ಲಿ ರೋಷನ್‌ಬೇಗ್, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಜತೆ ವೇದಿಕೆ ಹಂಚಿಕೊಂಡಿದ್ದರು.

ಈ ಸಂದರ್ಭದಲ್ಲಿ ಕೆಲ ಕಾಲ ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಕಾರ್ಯಕ್ರಮದ ಬಳಿಕ ಪ್ರತಿಕ್ರಿಯೆಗಾಗಿ ಮಾಧ್ಯಮಗಳು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ನೀಡದೆ ಹೊರ ನಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News