×
Ad

ಪುತ್ತೂರಿನ ದಿಲ್ಮಾನಾಗೆ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ

Update: 2019-06-14 20:11 IST

ಪುತ್ತೂರು:  ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿದ್ದ ಪುತ್ತೂರು ಸರ್ವೆ ಗ್ರಾಮದ ರೆಂಜಲಾಡಿಯ ಖದೀಜತ್ ದಿಲ್ಶಾನಾ ಅವರಿಗೆ ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರ 'ಕನ್ನಡ ಭಾಷಾ ಮಾಧ್ಯಮ' ಪ್ರಶಸ್ತಿ ನೀಡಿ ಗೌರವಿಸಿದೆ.  

ಮೈಸೂರಿನ ಕರ್ನಾಟಕ ಕಲಾ ಮಂದಿರದಲ್ಲಿ ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖದೀಜತ್ ದಿಲ್ಶಾನಾ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊಫೆಸರ್ ಎಸ್.ಜಿ ಸಿದ್ದರಾಮಯ್ಯ ಅವರು ಪ್ರಮಾಣ ಪತ್ರ, ನಗದು ಬಹುಮಾನವನ್ನೊಳಗೊಂಡ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. 

ಕನ್ನಡ ಅಭಿವೃದ್ಧಿ ಪ್ರಾಧಿಕಾರ `ಕನ್ನಡ ಮಾಧ್ಯಮ ಪ್ರಶಸ್ತಿಗೆ' ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮೈಸೂರು ವಿಭಾಗ ವ್ಯಾಪ್ತಿಯ 9 ಜಿಲ್ಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿತ್ತು. 

ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ಬದ್ರಿಯಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಹನೀಫ್ ರೆಂಜಲಾಡಿ-ಜಮೀಲಾ ದಂಪತಿ ಪುತ್ರಿಯಾದ ದಿಲ್ಶಾನಾ ಅವರು ಸರ್ವೆ ಗ್ರಾಮದ ಕಲ್ಪಣೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾಭ್ಯಾಸ ಮಾಡಿದ್ದರು.

ಪ್ರಸ್ತುತ ಅವರು ಕುಂಬ್ರದ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಶಿಕ್ಷಣ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News