ವಿವೇಕಾನಂದ ಕಾಲೇಜ್‍ನಲ್ಲಿ ವಿಶ್ವ ಪರಿಸರ ದಿನಾಚರಣೆ

Update: 2019-06-14 14:51 GMT

ಪುತ್ತೂರು: ಪ್ರ್ರತಿಯೊಬ್ಬರೂ ಒಂದೊಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಪ್ರತಿಜ್ಞೆಯನ್ನು ಕೈಗೊಂಡು ಕಾರ್ಯಪ್ರವೃತ್ತರಾದರೆ ನೆಲ ಜಲದ ಸಂರಕ್ಷಣೆ ಮಾಡಲು ಸಾಧ್ಯ ಎಂದು ವಿವೇಕಾನಂದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸುಬ್ರಮಣ್ಯ ಭಟ್.ಟಿ.ಎಸ್ ಅವರು ಹೇಳಿದರು. 

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮತ್ತು ಐಎಸ್‍ಟಿಇ ಸ್ಟಾಫ್ ಚಾಪ್ಟರ್ ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ  ಅವರು ಕಾಲೇಜಿನ ಆವರಣದಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.  

ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಮಾತನಾಡಿ, ಪರಿಸರದ ಸಂರಕ್ಷಣೆಗೆ ಕಾಲೇಜು ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಸುತ್ತ ಮುತ್ತಲ ಗ್ರಾಮಗಳಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದರು.
ಕಾಲೇಜಿನ ಆವರಣದಲ್ಲಿ ಅನೇಕ ಔಷಧೀಯ ಸಸ್ಯಗಳನ್ನು ಈ ಸಂದರ್ಭದಲ್ಲಿ ನೆಡಲಾಯಿತು.

ಕ್ಯಾಂಪಸ್ ನಿರ್ದೇಶಕ ಪ್ರೊ.ವಿವೇಕ್ ರಂಜನ್ ಭಂಡಾರಿ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಸಂದೀಪ್.ಜೆ.ನಾಯಕ್ ಸ್ವಾಗತಿಸಿದರು. ಡಾ.ಸೌಮ್ಯ.ಎನ್.ಜೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News