ಅಸಾಂಜ್ ಗಡಿಪಾರು ವಿಚಾರಣೆ 2020 ಫೆಬ್ರವರಿಯಲ್ಲಿ

Update: 2019-06-14 15:40 GMT

ಲಂಡನ್, ಜೂ. 14: ವಿಕಿಲೀಕ್ಸ್ ಸ್ಥಾಪಕ ಜೂಲಿಯನ್ ಅಸಾಂಜ್‌ರನ್ನು ಅಮೆರಿಕಕ್ಕೆ ಗಡಿಪಾರು ಮಾಡುವುದಕ್ಕೆ ಸಂಬಂಧಿಸಿದ ಪೂರ್ಣ ವಿಚಾರಣೆಯನ್ನು ಮುಂದಿನ ವರ್ಷದ ಫೆಬ್ರವರಿ ತಿಂಗಳಿಗೆ ಬ್ರಿಟಿಶ್ ನ್ಯಾಯಾಧೀಶರೊಬ್ಬರು ಶುಕ್ರವಾರ ನಿಗದಿಪಡಿಸಿದ್ದಾರೆ.

47 ವರ್ಷದ ಅಸಾಂಜ್ ಬೇಹುಗಾರಿಕೆ ಆರೋಪದಲ್ಲಿ ಅಮೆರಿಕಕ್ಕೆ ಬೇಕಾಗಿದ್ದಾರೆ.

ಅಫ್ಘಾನಿಸ್ತಾನ ಮತ್ತು ಇರಾಕ್‌ಗಳಲ್ಲಿ ಅಮೆರಿಕ ನಡೆಸಿದ ಬಾಂಬ್ ದಾಳಿಗಳಿಗೆ ಸಂಬಂಧಿಸಿ ಅಸಾಂಜ್ 2010ರಲ್ಲಿ ಬೃಹತ್ ಪ್ರಮಾಣದಲ್ಲಿ ರಹಸ್ಯ ಸೇನಾ ಮತ್ತು ರಾಜತಾಂತ್ರಿಕ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದರು. ಈ ಮೂಲಕ ಬೇಹುಗಾರಿಕೆ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪವನ್ನು ಅವರು ಎದುರಿಸುತ್ತಿದ್ದಾರೆ.

ಪ್ರಸಕ್ತ, 2012ರಲ್ಲಿ ಬ್ರಿಟಿಶ್ ನ್ಯಾಯಾಲಯವೊಂದರ ಜಾಮೀನು ಶರತ್ತುಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ 50 ವಾರಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News