ಚಿತ್ರಕಲಾ ಪರಿಷತ್ ಕಾರ್ಯಕಾರಿ ಸಮಿತಿಗೆ ಚುನಾವಣೆ ವಿಚಾರ: ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಆದೇಶ

Update: 2019-06-14 16:45 GMT

ಬೆಂಗಳೂರು, ಜೂ.14: ಕರ್ನಾಟಕ ಚಿತ್ರಕಲಾ ಪರಿಷತ್‌ನ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ಆಯ್ಕೆಗಾಗಿ ಜೂ.16ರಂದು ನಡೆಯಲಿರುವ ಚುನಾವಣಾ ಫಲಿತಾಂಶವನ್ನು ಪ್ರಕಟಿಸದಂತೆ ಹೈಕೋರ್ಟ್ ಆದೇಶ ನೀಡಿದೆ.

ಈ ಕುರಿತು ಪಿ.ರಾಜಶೇಖರ್, ಕೃಷ್ಣಾರೆಡ್ಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, 2007ರಲ್ಲಿದ್ದ ಕಾರ್ಯಕಾರಿ ಸಮಿತಿಯ ಮೇಲೆ 60 ಲಕ್ಷ ರೂ.ಅಕ್ರಮ ನಡೆಸಿದ ಆರೋಪವಿದೆ. ಅಲ್ಲದೆ, ಆರೋಪ ಹೊತ್ತವರೂ ಜೂ.16ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ, ಈ ಚುನಾವಣೆಯನ್ನು ಮುಂದೂಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಚುನಾವಣಾ ಫಲಿತಾಂಶವನ್ನು ಪ್ರಕಟಿಸದಂತೆ ನಿರ್ದೇಶಿಸಿತು. ಚಿತ್ರಕಲಾ ಪರಿಷತ್‌ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರುಗಳ ಚುನಾವಣೆ ಜೂ.16ರಂದು ನಡೆಯಲಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಅವರುಗಳು 2019ರಿಂದ 2021ರವರೆಗೆ ಅಧಿಕಾರದಲ್ಲಿ ಇರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News