ಕಲ್ಲುಕೋರೆಯಲ್ಲಿ ಅವಘಡ ನಡೆದರೆ ಕ್ರಿಮಿನಲ್ ಪ್ರಕರಣ

Update: 2019-06-14 16:57 GMT

ಉಡುಪಿ, ಜೂ.14: ಜಿಲ್ಲೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಕಲ್ಲು ಗಣಿ ಗುತ್ತಿಗೆದಾರರಿಗೆ ಹಾಗೂ ಈಗಾಗಲೇ ಅವಧಿ ಮುಗಿದಿರುವ ಈ ಹಿಂದೆ ನಿರ್ವಹಿಸಿದ ಕಲ್ಲು ಗಣಿಗುತ್ತಿಗೆದಾರರೂ ಸಹ ಕಲ್ಲುಕೋರೆಗಳ ಸುತ್ತಲೂ ತಂತಿ ಬೇಲಿ ಅಳವಡಿಸಿ, ಅಪಾಯ ಪ್ರದೇಶ ಎಂಬ ಎಚ್ಚರಿಕೆಯ ಸೂಚನಾ ಪಲಕವನ್ನು ಅಳವಡಿಸಲು ಸೂಚಿಸಲಾಗಿದೆ.

ಆದಾರೂ ಚಾಲ್ತಿ/ ಅವಧಿ ಮುಗಿದಿರುವ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಅವಘಡಗಳು ಸಂಭವಿಸಿದಲ್ಲಿ ಸಂಬಂಧಿಸಿದ ಕಲ್ಲು ಗಣಿ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.

ಮಳೆಗಾಲದಲ್ಲಿ ಜಿಲ್ಲೆಯ ಕಲ್ಲು ಕೋರೆಗಳು ಹಾಗೂ ಈ ಹಿಂದೆ ನಿರ್ವಹಿಸಿದ ಕಲ್ಲು ಕೋರೆ ಗುಂಡಿಗಳಲ್ಲಿ ನೀರು ಸಂಗ್ರಹವಾಗುತ್ತದೆ. ಆದ್ದರಿಂದ ನೀರು ತುಂಬಿರುವ ಕಲ್ಲುಕೋರೆ ಗುಂಡಿಗಳ ಬಳಿ ಮಹಿಳೆಯರು, ಮಕ್ಕಳು ಮತ್ತು ಸಾರ್ವಜನಿಕರು ತೆರಳದಂತೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News