ಪಶ್ಚಿಮ ಬಂಗಾಳದಲ್ಲಿ 700 ಕ್ಕೂ ಅಧಿಕ ಸರಕಾರಿ ವೈದ್ಯರು ರಾಜೀನಾಮೆ

Update: 2019-06-15 05:03 GMT

ಕೋಲ್ಕತಾ,  ಜೂ.15 : ಪಶ್ಚಿಮ ಬಂಗಾಳದಲ್ಲಿ ಕೆಲವು  ದಿನಗಳಿಂದ ನಡೆಯುತ್ತಿರುವ ವೈದ್ಯರ ಮುಷ್ಕರ ತಾರಕಕ್ಕೇರಿದ್ದು, ಸುಮಾರು 700ಕ್ಕೂ ಅಧಿಕ ವೈದ್ಯರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಖ್ಯ ಮಂತ್ರಿ  ಮಮತಾ ಬ್ಯಾನರ್ಜಿ ಪ್ರತಿಭಟನಾ ನಿರತ ವೈದ್ಯರೊಂದಿಗೆ ಸಭೆ ನಡೆಸಲು ಅನುಮತಿ ನೀಡಿದ್ದಾರೆ.

ವೈದ್ಯರ ಮುಷ್ಕರದಿಂದಾಗಿ ಬಂಗಾಳದಲ್ಲಿ ಸತತ ನಾಲ್ಕನೇ ದಿನವೂ ಸರಕಾರಿ  ಸೇವೆಯಲ್ಲಿ  ಸಮಸ್ಯೆ ಉಂಟಾಗಿದೆ. ಶನಿವಾರ  ಸಹಸ್ರಾರು  ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. 

ಶುಕ್ರವಾರ ವೈದ್ಯರು  ತಮ್ಮ ಪ್ರತಿಭಟನೆ ಕೈ ಬಿಡಲು ಕೆಲವು ಷರತ್ತುಗಳನ್ನು ವಿಧಿಸಿದ್ದರು. ಈ ಷರತ್ತುಗಳ ಪೈಕಿ ಪ್ರಮುಖವಾಗಿ ಎಸ್ಎಸ್ ಕೆಎಂ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಾವು ನಡೆದುಕೊಂಡ ರೀತಿಗೆ ಬೇಷರತ್ ಕ್ಷಮೆಯಾಚಿಸಬೇಕು ,ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವೈದ್ಯರ ಆರೋಗ್ಯ ವಿಚಾರಿಸಬೇಕು, ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ನೀಡಬೇಕು. ವೈದ್ಯರಿಗೆ ರಕ್ಷಣೆ ನೀಡದ ಪೊಲೀಸರ ವಿರುದ್ಧ ನ್ಯಾಯಾಂಗ ತನಿಖೆಗೆ ನಡೆಸಬೇಕು ಮತ್ತಿತರರ ಬೇಡಿಕೆಗಳನ್ನು ವೈದ್ಯರು ಮುಂದಿಟ್ಟಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News