ಸಂಪುಟ ಉಪ ಸಮಿತಿ ರಚನೆ ಸ್ವಾಗತಾರ್ಹ: ಮಾಜಿ ಸಚಿವ ಎಚ್.ಕೆ.ಪಾಟೀಲ್

Update: 2019-06-15 13:50 GMT

ಬೆಂಗಳೂರು, ಜೂ.15: ಜಿಂದಾಲ್ ಕಂಪೆನಿಗೆ ಭೂಮಿ ನೀಡುವ ಕುರಿತು ಕಳೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ನನ್ನ ಹಾಗೂ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಿ, ಸಾಧಕ ಬಾಧಕಗಳನ್ನು ಅಧ್ಯಯನ ಮಾಡುವ ಮತ್ತು ದೂರುಗಳ ಪರಿಶೀಲನೆ ಮಾಡಲು ಸಚಿವ ಸಂಪುಟದ ಉಪ ಸಮಿತಿ ರಚನೆಗೆ ನಿರ್ಣಯ ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಅವರು, ಸಚಿವ ಸಂಪುಟದ ಉಪ ಸಮಿತಿ ಸಾರ್ವಜನಿಕ ಆಕ್ಷೇಪಗಳನ್ನು ಮತ್ತು ಕಂಪೆನಿ ವಿರುದ್ಧದ ಎಲ್ಲ ಆರೋಪಗಳನ್ನು ಸಮರ್ಪಕವಾಗಿ ಪರಿಶೀಲಿಸುತ್ತದೆ ಎಂದು ಆಶಿಸುವೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News