ಬೇಡಿಕೆಗಳನ್ನು ಸ್ವೀಕರಿಸುತ್ತೇವೆ, ಕರ್ತವ್ಯಕ್ಕೆ ಮರಳಿ: ವೈದ್ಯರಿಗೆ ಮಮತಾ ಕರೆ

Update: 2019-06-15 18:16 GMT

ಕೋಲ್ಕತಾ, ಜೂ. 15: ವೈದ್ಯರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಶನಿವಾರ ಭರವಸೆ ನೀಡಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕರ್ತವ್ಯಕ್ಕೆ ಮರಳುವಂತೆ ವೈದ್ಯರಿಗೆ ಸೂಚಿಸಿದ್ದಾರೆ.

 ‘‘ಸಾವಿರಾರು ಜನರು ವೈದ್ಯಕೀಯ ಚಿಕಿತ್ಸೆಗಾಗಿ ಕಾಯುತ್ತಿರುವುದರಿಂದ ಕರ್ತವ್ಯ ಆರಂಭಿಸಿ ಎಂದು ನಾನು ವೈದ್ಯರಲ್ಲಿ ಮನವಿ ಮಾಡುತ್ತೇನೆ’’ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಸಭೆಗೆ ಆಗಮಿಸದ ವೈದ್ಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಮತಾ ಬ್ಯಾನರ್ಜಿ, “ವೈದ್ಯರನ್ನು ಭೇಟಿಯಾಗಲು ನಾನು ಹಲವು ಸಚಿವರನ್ನು, ಪ್ರಾಥಮಿಕ ಕಾರ್ಯದರ್ಶಿಗಳನ್ನು ಕಳುಹಿಸಿದೆ. ನಾನು ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಿದೆ ಹಾಗೂ ಸಭೆಗೆ ಆಗಮಿಸುವ ಕಿರಿಯ ವೈದ್ಯರಿಗಾಗಿ ಕಾದೆ. ಪ್ರತಿಯೊಬ್ಬರೂ ಸಂವಿಧಾನಿಕ ಸಂಸ್ಥೆಗೆ ಮಾನ್ಯತೆ ನೀಡಬೇಕು” ಎಂದರು.

ಕಿರಿಯ ವೈದ್ಯರ ಪ್ರತಿಭಟನೆ ಐದನೇ ದಿನಕ್ಕೆ ಕಾಲಿರಿಸಿದರೂ ನಾವು ಎಸ್ಮಾ ಕಾಯ್ದೆ ಜಾರಿಗೊಳಿಸಿಲ್ಲ ಅಥವಾ ಅವರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News