ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ ರಕ್ಷಕರ ಸಭೆ

Update: 2019-06-15 16:52 GMT

ಬಂಟ್ವಾಳ, ಜೂ. 15: ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ - ರಕ್ಷಕರ ಸಭೆ ಅಧ್ಯಕ್ಷ ಬಿ.ಎ.ಸುಲೈಮಾನ್ ಅಧ್ಯಕ್ಷತೆಯಲ್ಲಿ ಶಾಲಾ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಮಂಗಳೂರು ಪಶ್ಚಿಮ ವಲಯದ ಪೋಲಿಸ್ ವರಿಷ್ಠಾಕಾರಿ ಉಮಾ ಪ್ರಶಾಂತ್ ಆಗಮಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಸಲಹೆ ನೀಡಿದರು.

ತೌಹೀದ್ ಶಿಕ್ಷಣ ಸಂಸ್ಥೆಯ ಸ್ಥಾಪನೆ ಹಾಗೂ ಅಭಿವ್ಧೃಯ ಕುರಿತು ಕಾರ್ಯದರ್ಶಿ ಬಿ. ಅಬ್ದುಲ್ ಖಾದರ್ ಪ್ರಸ್ತಾವನೆಗೈದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಬಿ.ಎ ಮೊಹಮ್ಮದ್ ಶಾಲೆಯ ಹೊಸ ಯೋಜನೆಗಳಾದ ಶಿಶು ವಿಹಾರ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸುವ ಬಗ್ಗೆ ಪ್ರಸ್ತಾವನೆಗೈದರು.

ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿಯಾದ ಮೆಟಿಲ್ಡಾ ಡಿಕೋಸ್ತ ಶಾಲೆಯ ನಿಯಮ ನಿಬಂಧನೆಗಳ ಬಗ್ಗೆ ಸವಿಸ್ತಾರವಾಗಿ ಪೋಷಕರಿಗೆ ವಿವರಿಸಿದರು. ಮುಖ್ಯ ಅತಿಥಿಯಾದ ಬಿ.ಎಚ್ ಖಾದರ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಆಡಳಿತ ಮಂಡಳಿಯ ಸಂಚಾಲಕರಾದ ಮೊಹಮ್ಮದ್ ಸಗೀರ್, ಸದಸ್ಯರಾದ ರಿಯಾಝ್ ಹುಸೇನ್, ಮೊಹಮ್ಮದ್ ಇಸ್ಮಾಯಿಲ್, ಪಿ.ಟಿ.ಎ ಅಧ್ಯಕ್ಷರಾದ ಮೊಹಮ್ಮದ್ ಹನೀಫ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಆಡಳಿತ ಮಂಡಳಿಯ ಮತ್ತು ಶಿಕ್ಷಕ ರಕ್ಷಕ ಸಂಘದ ವತಿಯಿಂದ 2018-19ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ ಬಹುಮಾನ ವಿತರಿಸಲಾಯಿತು ಹಾಗೂ ಎಸ್.ಎಸ್.ಎಲ್.ಸಿ ತರಗತಿಗೆ ತರಬೇತಿ ನೀಡಿದ ಶಿಕ್ಷಕಿಯರಿಗೂ ಬಹುಮಾನ ವಿತರಿಸಿ ಅಭಿನಂದಿಸಲಾಯಿತು.

ಶಿಕ್ಷಕ-ರಕ್ಷಕ ಸಂಘದ 2018-19ರ ಸಾಲಿನ ಕಾರ್ಯ ಕಲಾಪಗಳ ವರದಿಯನ್ನು ಪಿ.ಟಿ.ಎ ಕಾರ್ಯದರ್ಶಿ ನಸೀಮ್ ನೂರ್ ವಾಚಿಸಿದರು. 2019-20ರ ಸಾಲಿಗೆ ಪಿ.ಟಿ.ಎ. ಸದಸ್ಯರನ್ನು ನೇಮಕ ಮಾಡಲಾಯಿತು. ಕೆ.ಜಿ ವಿಭಾಗದ ಮುಖ್ಯ ಶಿಕ್ಷಕಿ ಮಮತಾ ಸುವರ್ಣ ಸ್ವಾಗತಿಸಿದರು. ಶಿಕ್ಷಕಿಯರಾದ ನಿಶ್ಮಿತ, ಮೀನಾ, ರಂಶೀನ ಮತ್ತು ಪೃಥ್ವಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರಚನಾ ಎನ್. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News