ವೈದ್ಯರ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಸೂಚನೆ

Update: 2019-06-15 17:40 GMT

ಬೆಂಗಳೂರು, ಜೂ.15: ಭಾರತೀಯ ವೈದ್ಯಕೀಯ ಸಂಘವು ಜೂ.17ರಂದು ದೇಶಾದ್ಯಂತ ವೈದ್ಯರ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲ ವೈದ್ಯರು ಮುಷ್ಕರದಲ್ಲಿ ಭಾಗವಹಿಸದೇ ಹಾಗೂ ವೈದ್ಯೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು ಸೂಚಿಸಿದ್ದಾರೆ.

ತುರ್ತು ಪರಿಸ್ಥಿತಿಯನ್ನು ಹೊರತುಪಡಿಸಿ, ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಯಾವುದೇ ರಜೆಯನ್ನು ಮಂಜೂರು ಮಾಡದಿರಲು ಸೂಚಿಸಿದೆ. ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವಂತೆ ಸೂಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗಿದಲ್ಲಿ ತಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News