ವೈದ್ಯರ ಮುಷ್ಕರ: ಪ್ರತ್ಯೇಕ ವರದಿ ಸಲ್ಲಿಸುವಂತೆ ಪ.ಬಂ. ಸರಕಾರಕ್ಕೆ ಕೇಂದ್ರ ಸೂಚನೆ

Update: 2019-06-15 18:08 GMT

ಹೊಸದಿಲ್ಲಿ, ಜೂ. 15: ಪಶ್ಚಿಮಬಂಗಾಳದಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರ, ರಾಜಕೀಯ ಹಿಂಸಾಚಾರದ ಬಗ್ಗೆ ತೆಗೆದುಕೊಂಡ ಕ್ರಮಗಳು ಹಾಗೂ ಹಿಂಸಾಚಾರದ ಘಟನೆಗಳ ಬಗ್ಗೆ ನಡೆಸಿದ ತನಿಖೆಯ ಬಗ್ಗೆ ಪ್ರತ್ಯೇಕ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಸಚಿವಾಲಯ ಪಶ್ಚಿಮಬಂಗಾಳ ಸರಕಾರಕ್ಕೆ ಸೂಚಿಸಿದೆ.

ವೈದ್ಯರ ಮುಷ್ಕರದ ಬಗ್ಗೆ ಪಶ್ಚಿಮಬಂಗಾಳ ಸರಕಾರಕ್ಕೆ ಸಲಹೆಗಳನ್ನು ನೀಡಿರುವ ಕೇಂದ್ರ ಗೃಹ ಸಚಿವಾಲಯ, ಈ ವಿಷಯದ ಕುರಿತು ತುರ್ತು ವರದಿ ನೀಡುವಂತೆ ನಿರ್ದೇಶಿಸಿದೆ.

ಪಶ್ಚಿಮಬಂಗಾಳದಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ತಮ್ಮ ಸುರಕ್ಷೆ ಬಗ್ಗೆ ದೇಶದ ವಿವಿಧ ಭಾಗಗಳ ವೈದ್ಯರು, ಆರೋಗ್ಯ ಸೇವೆ ನೀಡುತ್ತಿರುವ ವೃತ್ತಿಪರರು ಹಾಗೂ ವೈದ್ಯಕೀಯ ಸಂಘಟನೆಗಳ ಹಲವು ಅಹವಾಲುಗಳನ್ನು ಸಚಿವಾಲಯ ಸ್ವೀಕರಿಸಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಮುಷ್ಕರದ ಕುರಿತು ಕೂಡಲೇ ವಿಸ್ತೃತ ವರದಿ ಸಲ್ಲಿಸಿ ಎಂದು ಸಲಹೆಯಲ್ಲಿ ನಿರ್ದೇಶಿಸಲಾಗಿದೆ.

ಇದು ಈ ಪಶ್ಚಿಮಬಂಗಾಳ ಸರಕಾರಕ್ಕೆ ನೀಡುತ್ತಿರುವ ಎರಡನೇ ಸಲಹೆ. ಈ ಹಿಂದೆ ಲೋಕಸಭಾ ಚುನಾವಣೆ ಸಂದರ್ಭ ರಾಜಕೀಯ ಹಿಂಸಾಚಾರಕ್ಕೆ ಸಂಬಂಧಿಸಿ ಜೂನ್ 9ರಂದು ಮೊದಲನೇ ಸಲಹೆ ನೀಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News