ಜೂ.21 ರಿಂದ ಎಸೆಸೆಲ್ಸಿ ಪೂರಕ ಪರೀಕ್ಷೆ ಆರಂಭ

Update: 2019-06-16 14:01 GMT

ಬೆಂಗಳೂರು, ಜೂ.16: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಜೂ.21 ರಿಂದ ಜೂ.28 ರವರೆಗೂ ನಡೆಯಲಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆಗೆ ಹಾಗೂ ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಬೇಕೆಂದು ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ.

ಈ ಹಿನ್ನೆಲೆಯಲ್ಲಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 144ನೆ ಪ್ರಕರಣದ ಅನ್ವಯ ಜೂ.21 ರಿಂದ 28ರವರೆಗೆ ಪರೀಕ್ಷೆಗಳು ನಡೆಯುವ ದಿನಗಳಂದು ಹಾಗೂ ಪರೀಕ್ಷಾ ಸಮಯದಲ್ಲಿ ಕೇಂದ್ರಗಳ ಬಳಿಯ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ.

ವೇಳಾಪಟ್ಟಿ

ಜೂ.21: ಗಣಿತ, ಸಮಾಜಶಾಸ್ತ್ರ

ಜೂ.22: ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್.

ಜೂ.24: ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಅಥವಾ ಹಿಂದೂಸ್ತಾನಿ ಸಂಗೀತ

ಜೂ.25: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಸಂಸ್ಕೃತ

ಜೂ.26: ಸಮಾಜ ವಿಜ್ಞಾನ

ಜೂ.27: ಇಂಗ್ಲಿಷ್, ಕನ್ನಡ

ಜೂ.28: ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News