ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಯುವಕ

Update: 2019-06-16 16:59 GMT
ಸಾಂದರ್ಭಿಕ ಚಿತ್ರ

ಚಾಮರಾಜನಗರ, ಜೂ.16 : ತಾಲೂಕಿನ ಚಂದಕವಾಡಿ ಗ್ರಾಮದಲ್ಲಿ ಯುವಕನೊಬ್ಬ ಶನಿವಾರ ಸಂಜೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಗ್ರಾಮದ ರಂಗಾಚಾರಿ ಅವರ ಪುತ್ರ ಶಶಿಕುಮಾರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಮರಗೆಲಸ ಮಾಡಿಕೊಂಡಿದ್ದ ಈತ ಶನಿವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆ ಸಹ ಭಾಗಶಃ ಬೆಂಕಿಗೆ ಆಹುತಿಯಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News