ಪ್ರಾಪರ್ಟಿ ಕಾರ್ಡ್ ಕಡ್ಡಾಯ ಆದೇಶದಿಂದ ಉಂಟಾದ ಸಮಸ್ಯೆ ಬಗ್ಗೆ ಕಂದಾಯ ಸಚಿವರ ಗಮನಕ್ಕೆ ತರಲಾಗುವುದು: ಐವನ್ ಡಿಸೋಜ

Update: 2019-06-17 08:59 GMT

ಮಂಗಳೂರು, ಜೂ.17: ಪ್ರಾಪರ್ಟಿ ಕಾರ್ಡ್ ಕಡ್ಡಾಯ ಆದೇಶದಿಂದ ಆಗಿರುವ ಸಮಸ್ಯೆಯ ಬಗ್ಗೆ ಕಂದಾಯ ಸಚಿವರ ಗಮನಕ್ಕೆ ತಂದು ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದು ಎಂದು ಕರ್ನಾಟಕ ಸರ್ಕಾರದ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ತಿಳಿಸಿದ್ದಾರೆ.

ನಗರದ ಮಿನಿ ವಿಧಾನ ಸೌಧದ ಬಳಿ ಇರುವ ಪ್ರಾಪರ್ಟಿ ಕಾರ್ಡ್ ನೋಂದಣಿ ಕಚೇರಿಗೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರನ್ನುದ್ದೇಶಿ ಮಾತನಾಡುತ್ತಿದ್ದರು.

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 1,53,000 ಜನರಿಗೆ ಪ್ರಾಪರ್ಟಿ ಕಾರ್ಡ್ ನೀಡುವ ಗುರಿ ಇದ್ದು ಇದುವರೆಗೆ 41ಸಾವಿರ ಜನರಿಗೆ ಕಾರ್ಡ್ ನೀಡಲಾಗಿದೆ. ಆದರೆ ಮಂಗಳೂರಿನ ಜನಸಂಖ್ಯೆಯ ಆಧಾರದಲ್ಲಿ ಹೆಚ್ಚು ಸಿಬ್ಬಂದಿಗಳ ಅಗತ್ಯವಿದೆ. ಈ ಬಗ್ಗೆ ಕಂದಾಯ ಸಚಿವರಿಗೆ ವರದಿ ನೀಡಲಾಗುವುದು ಎಂದು ಐವನ್ ಡಿಸೋಜ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News