ವೈದ್ಯರ ಮುಷ್ಕರಕ್ಕೆ ಕೊಡಗಿನಲ್ಲಿ ಮಿಶ್ರ ಪ್ರತಿಕ್ರಿಯೆ

Update: 2019-06-17 12:19 GMT

ಮಡಿಕೇರಿ, ಜೂ.17: ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ವೈದ್ಯರ ಮೇಲಿನ ಹಲ್ಲೆ ಪ್ರಕರಣವನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ರಾಷ್ಟ್ರವ್ಯಾಪಿ ಕರೆ ನೀಡಿದ್ದ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಅತ್ಯಗತ್ಯ ಅಲ್ಲದ ಆರೋಗ್ಯ ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ಸೂಚಿಸುವಂತೆ ಸಂಘ ಕೋರಿಕೊಂಡಿತ್ತು. ಆದರೆ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್‍ಗಳು ಮಾತ್ರ ಕಾರ್ಯ ಸ್ಥಗಿತಗೊಳಿಸಿದ್ದವು. ಸರಕಾರಿ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಖಾಸಗಿ ಆಸ್ಪತ್ರೆಗಳಿಗೆ ಆಗಮಿಸಿದ ರೋಗಿಗಳು ಸೇವೆ ಲಭ್ಯವಿಲ್ಲದೆ ವಾಪಾಸಾಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಆದರೆ ಸರಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೇವೆಗಳು ಲಭ್ಯವಿದ್ದ ಕಾರಣ ಮುಷ್ಕರದ ಬಿಸಿ ರೋಗಿಗಳನ್ನು ಅಷ್ಟೇನು ಕಾಡಲಿಲ್ಲ. 

ಖಾಸಗಿ ಆಸ್ಪತ್ರೆಗಳ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗಿತ್ತು ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ನವೀನ್ ಪತ್ರಿಕೆಗೆ ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News