ದುಷ್ಕರ್ಮಿಗಳಿಂದ ವಿದ್ಯಾರ್ಥಿಗೆ ಹಲ್ಲೆ: ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪಿಎಫ್‍ಐ ಆಗ್ರಹ

Update: 2019-06-17 13:02 GMT

ಬಂಟ್ವಾಳ, ಜೂ. 17: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ಅಬ್ದುಲ್ ಮುಷ್ತಾಕ್ (21) ಎಂಬ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಈ ಘಟನೆಯನ್ನು ಪಿಎಫ್‍ಐ ಬಂಟ್ವಾಳ ತಾಲೂಕು ಸಮಿತಿ ಖಂಡಿಸುವುದಾಗಿ ತಿಳಿಸಿದೆ.

ಬಂಟ್ವಾಳ ತಾಲೂಕಿನಲ್ಲಿ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದು, ಈ ಬಗ್ಗೆ ನಾಗರಿಕರು ಆತಂಕಕ್ಕೀಡಾಗಿದ್ದಾರೆ. ಆದ್ದರಿಂದ ಪೊಲೀಸರು ಈ ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಿಎಫ್‍ಐ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಇಜಾಝ್ ಅಹ್ಮದ್ ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ. ಇಂತಹ ಘಟನೆಗಳಿಂದ ಎದೆಗುಂದದೆ, ವದಂತಿಗಳಿಗೆ ಕಿವಿ ಕೊಡದೆ ಸಮಾಜದಲ್ಲಿ ಶಾಂತಿಯನ್ನು ಕಾಪಾಡಬೇಕೆಂದು ನಾಗರಿಕರೊಂದಿಗೆ ಮನವಿ ಮನವಿ ಮಾಡಿಕೊಂಡಿದ್ದಾರೆ.

ಕಾನೂನು ನೆರವು

ಪಿಎಫ್‍ಐ ಬಂಟ್ವಾಳ ತಾಲೂಕು ಸಮಿತಿ ನಿಯೋಗವು ಹಲ್ಲೆಗೊಳಗಾದ ಅಬ್ದುಲ್ ಮುಷ್ತಾಕ್ ಅವರನ್ನು ಆಸ್ಪತ್ರೆಗೆ ತೆರಳಿ ಯೋಗಕ್ಷೇಮ ವಿಚಾರಿಸಿ ಸಾಂತ್ವಾನ ಹೇಳಿದ್ದು, ಈ ಘಟನೆಯ ಬಗ್ಗೆ ಕಾನೂನು ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್, ಪ್ರಧಾನ ಕಾರ್ಯದರ್ಶಿಯಾದ ಸಲೀಮ್ ಫರಂಗಿಫೇಟೆ, ಮೆಲ್ಕಾರ್ ವಲಯ ಅಧ್ಯಕ್ಷ ಹನೀಫ್ ಬೊಳಿಯಾರ್ ಹಾಜರಿದ್ದರು ಎಂದು ಪಿಎಫ್‍ಐ ಬಂಟ್ವಾಳ ತಾಲೂಕು ಸಮಿತಿ ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News