ಪುಸ್ತಕ ಬಹುಮಾನಕ್ಕೆ ಜಾನಪದ ಕೃತಿಗಳ ಆಹ್ವಾನ

Update: 2019-06-17 15:11 GMT

ಉಡುಪಿ, ಜೂ.17: ಕರ್ನಾಟಕ ಜಾನಪದ ಅಕಾಡೆಮಿ ಜನವರಿ 1, 2018 ರಿಂದ ಅದೇ ಡಿ.31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ, ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಂತೆ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಈ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

 ಲೇಖಕರು/ಪ್ರಕಾಶಕರು/ಸಂಪಾದಕರು 4 ಕೃತಿಗಳನ್ನು, ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, ಬೆಂಗಳೂರು ಇವರಿಗೆ ಜು.15ರೊಳಗೆ ಖುದ್ದಾಗಿ, ಕೋರಿಯರ್ ಅಥವಾ ಅಂಚೆ ಮೂಲಕ ಕಳುಹಿಸುವಂತೆ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News