10 ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-06-17 16:31 GMT

ಬೆಂಗಳೂರು, ಜೂ.17: ರಾಜ್ಯ ಸರಕಾರವು ಆಡಳಿತಯಂತ್ರಕ್ಕೆ ಚುರುಕು ಮುಟ್ಟಿಸುವ ಹಿನ್ನೆಲೆಯಲ್ಲಿ ಸೋಮವಾರ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ-ಪಿ.ರವಿಕುಮಾರ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ-ಮಹೇಂದ್ರ ಜೈನ್, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯನ್ನಾಗಿ ಬಿ.ಎಚ್.ಅನಿಲ್ ಕುಮಾರ್‌ರನ್ನು ವರ್ಗಾವಣೆ ಮಾಡಲಾಗಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ-ರಾಕೇಶ್ ಸಿಂಗ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಯುಕ್ತೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ-ಡಾ.ಎನ್.ಮಂಜುಳಾ, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕಿ-ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ರನ್ನು ವರ್ಗಾವಣೆ ಮಾಡಲಾಗಿದೆ.

ಬಳ್ಳಾರಿ ಜಿಲ್ಲಾಧಿಕಾರಿ-ಎಸ್.ಎಸ್.ನಕುಲ್, ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಸಂಸ್ಥೆಯ ಆಯುಕ್ತ-ಡಾ.ವಿ.ರಾಮ್ ಪ್ರಸಾದ್ ಮನೋಹರ್, ರೇಷ್ಮೆ ಅಭಿವೃದ್ಧಿ ನಿರ್ದೇಶಕ-ಜಿ.ಸಿ.ವೃಷಬೇಂದ್ರ ಮೂರ್ತಿ ಹಾಗೂ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಕೆ.ಯಾಲಕ್ಕಿ ಗೌಡರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News