ಐಎಂಎ ವಂಚನೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ:

Update: 2019-06-17 17:40 GMT

ಮೈಸೂರು,ಜೂ.17: ಐಎಂಎ ವಂಚನೆ ಪ್ರಕರಣದಲ್ಲಿ ಸಚಿವರನ್ನಾಗಲಿ, ಶಾಸಕರನ್ನಾಗಲಿ ಯಾರೇ ಭಾಗಿಯಾಗಿದ್ದರು ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐಎಂಎ ವಂಚನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಐಎಂಎ ಮುಖ್ಯಸ್ಥ ಮನ್ಸೂರ್ ಆಲಿಯನ್ನು ಮೊದಲು ಬಂಧಿಸಬೇಕಿದೆ. ಅದಕ್ಕಾಗಿ  ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸದ್ಯ ಆತನ ಅಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ. ಈಗಾಗಲೇ ಆತನ ಕಟ್ಟಡ ಮತ್ತು ಅಂಗಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಐಎಂಎ ವಂಚನೆ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ, ಸಿಬಿಐಗೆ ವಹಿಸಿರುವ ಪ್ರಕರಣಗಳು ಏನಾಗಿದೆ ಎಂಬುದನ್ನು ನೀವೇ ನೋಡಿದ್ದೀರಾ. ನಮ್ಮ ರಾಜ್ಯದ ಪೊಲೀಸರೆ ಸಮರ್ಥರಿದ್ದರು. ಈಗಾಗಲೇ ಪ್ರಕರಣವನ್ನು ಎಸ್.ಐ.ಟಿ ಗೆ ವಹಿಸಲಾಗಿದೆ. ಪೊಲೀಸರು ಪ್ರಕರಣದ ಆರೋಪಿಯನ್ನು ಬಂಧಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.

ಶೋಭಾ ಕರಂದ್ಲಾಜೆ ವಿರುದ್ದ ಕಿಡಿ: ಗೃಹ ಸಚಿವ ಎಂ.ಬಿ.ಪಾಟೀಲ್‍ಗೆ ಕಾನೂನಿ ಜ್ಞಾನವಿಲ್ಲ ಎಂದು ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಕಿಡಿಕಾರಿದ ಗೃಹ ಸಚಿವ ಎಂ.ಬಿ.ಪಾಟೀಲ್, ಶೋಭಾ ಒಬ್ಬ ಹೆಣ್ಣು ಮಗಳು ಅವರ ಬಾಯಲ್ಲಿ ಇಂತಹ ಮಾತುಗಳು ಬರಬಾರದು. ನಾವು ಬಿಜಾಪುರದವರು ನಮ್ಮ ಬಾಯಲ್ಲಿ ಏನೇನೋ ಬರುತ್ತದೆ. ಹೆಣ್ಣು ಮಗಳು ಎಂದು ಸೂಕ್ಷ್ಮವಾಗಿ ಮಾತನಾಡುತ್ತಿದ್ದೇನೆ ಎಂದು ಹೇಳಿದರು.

ನಮ್ಮ ಸಂಸ್ಕೃತಿ, ಆಚಾರ ವಿಚಾರ ಏನು ಎಂದು ನಾಡಿನ ಜನರಿಗೆ ಗೊತ್ತಿದೆ. ಶೋಭಾ ಕರಂದ್ಲಾಜೆ ಅವರ ಸಂಸ್ಕೃತಿ ಆಚಾರ ವಿಚಾರ ಏನು ಎಂದು ರಾಜ್ಯದ ಜನರಿಗೆ ಗೊತ್ತಿದೆ. ಶೋಭಾ ದೊಡ್ಡ ಮೇಧಾವಿಗಳು, ಇವರ ಅಭಿಪ್ರಾಯಗಳಿದ್ದರೆ ಕ್ಯಾಬಿನೆಟ್ ಸಬ್ ಕಮಿಟಿ ಮುಂದೆ ಹೋಗಿ ಹೇಳಲಿ, ನಂತರ ಅವಲ್ಲಿಯ ವರದಿ ಬರುವವರೆಗೆ ತಾಳ್ಮೆಯಿಂದ ವರ್ತಿಸಲಿ ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News