ಅಮೆರಿಕದಲ್ಲಿ ಯೋಗ ದಿನಾಚರಣೆ

Update: 2019-06-17 17:52 GMT

 ವಾಶಿಂಗ್ಟನ್, ಜೂ. 17: ಅಮೆರಿಕದ ರಾಜಧಾನಿ ವಾಶಿಂಗ್ಟನ್‌ನಲ್ಲಿ ರವಿವಾರ ನಡೆದ ಅಂತರ್‌ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿದರು.

ಅಮೆರಿಕಕ್ಕೆ ಭಾರತದ ರಾಯಭಾರಿ ಹರ್ಷವರ್ಧನ ಶ್ರಿಂಗ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಮೆರಿಕದಲ್ಲಿ 3.67 ಕೋಟಿ ಜನರು ಯೋಗಾಭ್ಯಾಸ ನಡೆಸುತ್ತಿದ್ದಾರೆ ಎನ್ನುವುದು 2016ರಲ್ಲಿ ನಡೆದ ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ, ಹಾಗಾಗಿ, ಅಮೆರಿಕವು ಯೋಗದ ಎರಡನೇ ಮನೆಯಾಗಿದೆ ಎಂದು ಭಾರತೀಯ ರಾಯಭಾರಿ ಈ ಸಂದರ್ಭದಲ್ಲಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯ ಧ್ವನಿ-ದೃಶ್ಯ ಸಂದೇಶದ ಪ್ರಸಾರದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.

ಮ್ಯಾನ್ಮಾರ್ ಮತ್ತು ವಿಯೆಟ್ನಾಮ್‌ಗಳ ರಾಯಭಾರಿಗಳು, ಅಮೆರಿಕದ ವಿದೇಶಾಂಗ ಇಲಾಖೆಯ ಅಧಿಕಾರಿಗಳು, ವಿಶ್ವಬ್ಯಾಂಕ್, ಶೈಕ್ಷಣಿಕ ಸಂಸ್ಥೆಗಳು ಮತ್ತು ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಂಸ್ಕೃತ ಶ್ಲೋಕಗಳೊಂದಿಗೆ ಯೋಗ ದಿನದ ಕಾರ್ಯಕ್ರಮಗಳು ಮುಕ್ತಾಯಗೊಂಡವು.

ಅಧಿಕೃತ ಅಂತರ್‌ರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21ರಂದು ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News