ಕಡಲ್ಕೊರೆತ ಸಮಸ್ಯೆ ಪರಿಹರಿಸಲು ಸರಕಾರಗಳು ವಿಫಲ: ಇಲ್ಯಾಸ್ ತುಂಬೆ

Update: 2019-06-18 07:23 GMT

ಮಂಗಳೂರು, ಜೂ.18: ಕರಾವಳಿ ಕರ್ನಾಟಕದಲ್ಲಿ ಮಳೆಗಾಲದಲ್ಲಿ ನಿರಂತರವಾಗಿರುವ ಕಡಲ್ಕೊರೆತ ಸಮಸ್ಯೆ ಈ ಸಲವೂ ಕಂಡುಬಂದಿದೆ. ಕಳೆದ ಮೂರು ದಶಕಗಳಿಂದ ಕರಾವಳಿ ಕರ್ನಾಟಕದ ಮುಖ್ಯ ಸಮಸ್ಯೆಗಳಲ್ಲಿ ಒಂದಾಗಿರುವ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಇದುವರೆಗೆ ಸಾಧ್ಯವಾಗಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ದೂರಿದ್ದಾರೆ.

ಉಳ್ಳಾಲದ ಕಡಲ್ಕೊರೆತ ಕಾಣಿಸಿಕೊಂಡಿರುವ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು.

ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಈ ಬಾರಿ ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಸಂತ್ರಸ್ತ ಕುಟುಂಬಗಳನ್ನು ಸ್ಥಳಾಂತರ ಮಾಡಿ ಮಳೆಗಾಲದಲ್ಲಿ ಸುರಕ್ಷಿತ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂದರ್ಭ ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ಅಕ್ರಂ ಹಸನ್, ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಬ್ಬಾಸ್ ಕಿನ್ಯ, ನಗರ ಸಮಿತಿಯ ಅಧ್ಯಕ್ಷ ಅಬ್ಬಾಸ್ ಎ.ಆರ್, ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾದ ಉಳ್ಳಾಲ ಘಟಕಾಧ್ಯಕ್ಷ ಅಬೂಬಕರ್, ಕೌನ್ಸಿಲರ್‌ಗಳಾದ ರಮೀಝ್ ಕೋಡಿ, ಅಸ್ಗರ್ ಅಲಿ ಅಳೇಕಲ, ವಾರ್ಡ್ ಮುಖಂಡರಾದ ನಿರಝಾಮುದ್ದೀನ್ ಮೇಲಂಗಡಿ, ರವೂಫ್ ಹಳೆಕೋಟೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News