ಡಾ. ಪುರುಷೋತ್ತಮ ಬಿಳಿಮಲೆಗೆ ಪೊಳಲಿ ಪ್ರಶಸ್ತಿ

Update: 2019-06-18 12:42 GMT

ಉಡುಪಿ, ಜೂ.18: ಹೊಸದಿಲ್ಲಿ ಜವಾಹರಲಾಲ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ, ಜಾನಪದ ತಜ್ಞ ಹಾಗೂ ಸಂಸ್ಕೃತಿ ಚಿಂತಕರಾದ ಡಾ.ಪುರುಷೋತ್ತಮ ಬಿಳಿಮಲೆ 2019ನೇ ಸಾಲಿನ ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್.ಹೆಗ್ಡೆ ಇವರ ಜಂಟಿ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್. ಹೆಗ್ಡೆ ನೆನಪಿನಲ್ಲಿ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋನ ಕೇಂದ್ರದ ಮೂಲಕ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು 20,000 ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಸ್ಟ್‌ ತಿಂಗಳ ಮೊದಲ ವಾರದಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋನ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ.ಪುರುಷೋತ್ತಮ ಬಿಳಿಮಲೆ ಇವರು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಪಂಜದವರು. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದು ಮದರಾಸು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಮಂಗಳೂರು ವಿಶ್ವವಿದ್ಯಾಲಯದಿಂದ ಪ್ರೊ.ವಿವೇಕ ರೈ ಮಾರ್ಗದರ್ಶನದಲ್ಲಿ ಡಾಕ್ಟರೇ್ ಪದವಿಯನ್ನು ಪಡೆದುಕೊಂಡರು.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು, ಮಂಗಳೂರು ವಿವಿ, ಹಂಪಿ ಕನ್ನಡ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾಗಿ ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಹೊಸದಿಲ್ಲಿಯ ಅಮೆರಿಕನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಸ್ಟಡೀಸ್‌ನ ನಿರ್ದೇಶಕರಾಗಿ ದುಡಿದಿದ್ದಾರೆ.

ಮೆಕೆಂಜಿ ಕೈಫಿಯತ್ತುಗಳು, ಲಿಂಗರಾಜನ ಹುಕುಂನಾಮೆ, ದಲಿತಜಗತ್ತು, ಬಂಡಾಯ ದಲಿತ ಸಾಹಿತ್ಯ, ಶಿಷ್ಟ ಪರಿಶಿಷ್ಟ, ಕರಾವಳಿ ಜಾನಪದ, ಕೂಡುಕಟ್ಟು, ಜನಸಂಸ್ಕೃತಿ, ಬಹುರೂಪ, ಮೆಲುದನಿ ಇವರ ಪ್ರಮುಖ ಕೃತಿಗಳು. ‘ಕನ್ನಡ ಕಥನಗಳು’, ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಇವರ ಅಪ್ರಕಟಿತ ಕೃತಿಗಳು. ಭಾರತೀಯ ಜಾನಪದವನ್ನು ಆಳವಾಗಿ ಅ್ಯಸಿಸಿರುವ ಬಿಳಿಮಲೆ, ಭಾರತೀಯ ಸಂಸ್ಕತಿಯ ಅಧ್ಯಯನಕ್ಕೆ ಹೊಸ ವಿಸ್ತಾರವನ್ನು ನೀಡಿದ್ದಾರೆ. ಕವಿರಾಜ ಮಾರ್ಗ, ಗದಾಯುದ್ದಂ, ವಡ್ಡಾರಾಧನೆಗಳಂಥ ಕನ್ನಡದ ಮಹತ್ವದ ಅಭಿಜಾತ ಕೃತಿಗಳ ಇಂಗ್ಲಿಷ್ ಅವತರಣಿಕೆಗಳನ್ನು ತಮ್ಮ ಅಧ್ಯಯನ ಪೀಠದ ಮೂಲಕ ಪ್ರಕಟಿಸಿದ್ದಾರೆ.

ಇವರು ಅಮೆರಿಕಾ, ಇಸ್ರೇಲ್, ಬೆಲ್ಜಿಯಂ, ಬ್ರಿಟನ್ ಮುಂತಾದ ದೇಶಗಳಲ್ಲಿ ಉಪನ್ಯಾಸ ನೀಡಿದ್ದಾರೆ. ಸಾಹಿತ್ಯ, ಸಂಸ್ಕೃತಿ, ಜಾನಪದ ಕ್ಷೇತ್ರದಲ್ಲಿ ಇವರು ಸಲ್ಲಿಸಿದ ಸೇವೆಗೆ ಕರ್ನಾಟಕ ಜಾನಪದ ಅಕಾಡೆಮಿ, ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳು ದೊರಕಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News