ಮಂಗಳೂರು ಕೆಪಿಟಿ ಬಳಿ ಅಪಘಾತ: ಎಂಟು ಮಂದಿಗೆ ಗಾಯ; ಇಬ್ಬರು ಗಂಭೀರ

Update: 2019-06-18 15:56 GMT

ಮಂಗಳೂರು, ಜೂ.18: ನಗರದ ಕೆಪಿಟಿ ಖಾಸಗಿ ಕಾಲೇಜೊಂದರ ಸಮೀಪ ಮಂಗಳವಾರ ಸಂಜೆ ನಡೆದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನು ಆರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಎಲ್ಲ ಎಂಟು ಪ್ರಯಾಣಿಕರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿನತ್ತ ಇನ್ನೋವಾ ಕಾರು ಬರುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇನ್ನೊವಾ ಕಾರಿನಲ್ಲಿದ್ದ ಎಂಟೂ ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News