ಬೀಚ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆಯ ರಕ್ಷಣೆ

Update: 2019-06-18 16:29 GMT

ಮಂಗಳೂರು, ಜೂ.18: ಪಣಂಬೂರು ಬೀಚ್ ಕಿನಾರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ಜೀವರಕ್ಷಕ ದಳದವರು ರಕ್ಷಿಸಿದ್ದಾರೆ.

ವೆಂಕಟಮ್ಮ (65) ಆತ್ಮಹತ್ಯೆಗೆ ಯತ್ನಿಸಿದವರು. ಇವರು ಜೂ.16ರಂದು ವೃದ್ಧೆಯು ಪಣಂಬೂರು ಬೀಚ್ ಕಿನಾರೆಯಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಇದನ್ನು ಕಂಡು ಬೀಚ್ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ಮಹಿಳೆ ವಿಳಾಸ ಕೇಳುವಾಗ ಯಾವುದೇ ರೀತಿಯ ಸ್ಪಷ್ಟ ಉತ್ತರ ನೀಡದಿರುವುದರಿಂದ ಮಹಿಳೆಯನ್ನು ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನಶ್ಚೇತನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News