ಪೆಟ್ರೋಲ್ ಬಂಕ್‍ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದರೋಡೆ

Update: 2019-06-18 17:17 GMT

ಮಂಡ್ಯ, ಜೂ.18: ಕೆ.ಆರ್.ಪೇಟೆ ತಾಲೂಕಿನ ಸೋಮನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ರಾಘವೇಂದ್ರ ಪೆಟ್ರೋಲ್ ಬಂಕ್‍ನಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹಣ ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ.

ಎರಡು ಪಲ್ಸರ್ ಬೈಕ್‍ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಪೆಟ್ರೋಲ್ ಹಾಕಿಸಿಕೊಂಡ ತಕ್ಷಣ ಲಾಂಗ್‍ನಿಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹಣ ಕಸಿದುಕೊಂಡು ಪರಾರಿಯಾದರೆನ್ನಲಾಗಿದೆ.

ಘಟನೆ ದೃಶ್ಯ ಬಂಕ್‍ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಕ್ರಮವಹಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News