ಜೂ.20 ರಂದು ಬೃಹತ್ ಅಹಿಂಸಾ ಯಾತ್ರೆ

Update: 2019-06-18 17:30 GMT

ಬೆಂಗಳೂರು, ಜೂ.18: ಆಚಾರ್ಯ ಮಹಾ ಶರ್ಮನ್ ಶಿಷ್ಯರೊಂದಿಗೆ ನಗರಕ್ಕೆ ಆಗಮಿಸುತ್ತಿರುವುದರಿಂದ ಜೂ.20ರಂದು ಸುಶಿಲ್‌ಧಾಮ್ (ಜೈನ ಮಂದಿರ)ದಿಂದ ಬೃಹತ್ ಅಹಿಂಸಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂದಿರದ ಸದಸ್ಯ ಮೂಲ್‌ಚಂದ್ ನಹಾರ್, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕ ಬಿ.ಶಿವಣ್ಣ ಮತ್ತು ನಾರಾಯಣ ಚಿಕಿತ್ಸಾಲಯದ ಮುಖ್ಯಸ್ಥ ಪದ್ಮಭೂಷಣ್ ಡಾ.ದೇವಿಪ್ರಸಾದ್ ಶೆಟ್ಟಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಜೂನ್ 21ರಂದು ಬೆಳಗ್ಗೆ 10 ಗಂಟೆಗೆ ಆಚಾರ್ಯ ಶರ್ಮನ್ ಬರೆದಿರುವ, ಕನ್ನಡಕ್ಕೆ ಅನುವಾದಿಸಿರುವ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಗಳಾಗಿ ಡಿಸಿಎಂ ಡಾ.ಜಿ.ಪರಮೇಶ್ವರ್, ಶಾಸಕ ಎಂ.ಕೃಷ್ಣಪ್ಪ, ಮಾಜಿ ವಿಧಾನ ಪರಿಷತ್ತಿನ ಸದಸ್ಯ ದಯಾನಂದ ರೆಡ್ಡಿ ಮುಂತಾದವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಜೂನ್ 23ರಂದು ಬೆಳಗ್ಗೆ 9 ಗಂಟೆಗೆ ಅರಮನೆ ಮೈದಾನದಲ್ಲಿ ನಾಗರಿಕ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಮಹಾಸ್ವಾಮಿ, ಸಿಎಂ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಗೃಹ ಮಂತ್ರಿ ಎಂ.ಬಿ.ಪಾಟೀಲ್, ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್ ಮುಂತಾದವರು ಆಗಮಿಸಲಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News