ಸಾರಿಗೆ ನಿಗಮ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸಲು ಆಗ್ರಹ

Update: 2019-06-18 17:34 GMT

ಬೆಂಗಳೂರು, ಜೂ.18: ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳನ್ನು ಸರಕಾರದೊಂದಿಗೆ ವಿಲೀನಗೊಳಿಸಿ ನಿಗಮಗಳ ನೌಕರರನ್ನೂ ಸರಕಾರಿ ನೌಕರರೆಂದು ಘೋಷಣೆ ಮಾಡುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಕನ್ನಡ ಕೃಷಿ ಪ್ರತಿಷ್ಠಾನ ಆಗ್ರಹಿಸಿದೆ.

ಮಂಗಳವಾರ ನಗರದ ಪುರಭವನದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಮತ್ತು ಕಮಲಾ ಹಂಪನಾ ಮಾತನಾಡಿ, ಸಾರಿಗೆ ನೌಕರರು ಸರಕಾರಿ ನೌಕರರು ಅಲ್ಲ ಎಂಬುದು ನನಗೆ ಅಚ್ಚರಿಯಾಗಿದೆ. ಕೂಡಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸಿ, ಸಿಗುವ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದರು.

ಮಹಾನಗರ ಸಾರಿಗೆ ಸಂಸ್ಥೆ ನೌಕರರ ಕನ್ನಡ ಕೃಷಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಎಸ್.ಪ್ರೀತಂ ಮಾತನಾಡಿ, ಆಂಧ್ರಪ್ರದೇಶದ ಮಾದರಿಯಲ್ಲಿ ನಮ್ಮ ರಾಜ್ಯ ಸರಕಾರವು ಸಾರಿಗೆಯ ನಾಲ್ಕು ನಿಗಮಗಳನ್ನು ಸರಕಾರದೊಂದಿಗೆ ವಿಲೀನಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯಾದ್ಯಂತ 1.30ಲಕ್ಷ ನೌಕರರ ಸಹಿ ಸಂಗ್ರಹ ಮಾಡಿ, ಸಾಹಿತಿಗಳೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಸಿಎಂ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News