ಸಿಜೆಗೆ ನೀಡುವ ವೇತನ ತಮಗೂ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Update: 2019-06-18 18:06 GMT

ಬೆಂಗಳೂರು, ಜೂ.18: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ನೀಡುವ ವೇತನವನ್ನೇ ತಮಗೂ ನೀಡಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸಲು ಕೋರಿ ಕೆಎಟಿ ಅಧ್ಯಕ್ಷ , ನ್ಯಾಯಮೂರ್ತಿ ಭಕ್ತವತ್ಸಲ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತು ಸಿಜೆ ಅವರಿಗೆ ನೀಡುವ ವೇತನವನ್ನು ತಮಗೂ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ನೀಡುವ ವೇತನವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ಅಧ್ಯಕ್ಷರಿಗೆ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಈ ಹಿಂದೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠಕ್ಕೆ ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿ ವಜಾಗೊಂಡಿತ್ತು. ಈ ಆದೇಶವನ್ನು ಪ್ರಶ್ನಿಸಿ ನ್ಯಾ.ಭಕ್ತವತ್ಸಲ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ನ್ಯಾಯಪೀಠವು ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಎತ್ತಿ ಹಿಡಿದು, ಅರ್ಜಿಯನ್ನು ವಜಾಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News