ಕಡಬ: ಲಾರಿ, ಕಾರು-ದ್ವಿಚಕ್ರ ವಾಹನ ನಡುವೆ ಅಪಘಾತ; ಆರು ಮಂದಿಗೆ ಗಾಯ

Update: 2019-06-19 04:09 GMT

ಕಡಬ, ಜೂ.19. ಲಾರಿ, ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಆರು ಮಂದಿ ಗಾಯಗೊಂಡ ಘಟನೆ ಕಡಬದ ಹಳೇಸ್ಟೇಷನ್ ಸಮೀಪದ ತಿರುವಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ  ಕಾರು, ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು, ದ್ವಿಚಕ್ರ ವಾಹನ ಸವಾರರೂ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬಳ್ಳಾರಿ ಮೂಲದವರೆಂದು ಗುರುತಿಸಲಾಗಿದ್ದು, ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News