ವಿಶ್ವಕಪ್ ಟೂರ್ನಿಯಿಂದ ಶಿಖರ್ ಧವನ್ ಔಟ್

Update: 2019-06-19 11:49 GMT

ಹೊಸದಿಲ್ಲಿ, ಜೂ.19: ಹೆಬ್ಬೆರಳು ಗಾಯದಿಂದ ಸರಿಯಾದ ಸಮಯಕ್ಕೆ ಚೇತರಿಸಿಕೊಳ್ಳುವ ಸ್ಥಿತಿಯಲ್ಲಿಲ್ಲದ ಭಾರತದ ಆರಂಭಿಕ ಶಿಖರ್ ಧವನ್ ವಿಶ್ವಕಪ್ ಟೂರ್ನಿಯ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಧವನ್‌ಗೆ ಗಾಯದಿಂದ ಚೇತರಿಸಿಕೊಳ್ಳಲು ಎರಡು ವಾರಗಳಿಗೆ ಹೆಚ್ಚು ಸಮಯ ಅಗತ್ಯವಿರುವ ಕಾರಣ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಅವರು ವಿಶ್ವಕಪ್‌ನಲ್ಲಿ ಭಾಗವಹಿಸುವ ಸ್ಥಿತಿಯಲ್ಲಿಲ್ಲ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಇಂಗ್ಲೆಂಡ್‌ಗೆ ತೆರಳಿರುವ ವಿಕೆಟ್‌ಕೀಪರ್-ದಾಂಡಿಗ ರಿಷಭ್ ಪಂತ್ ಅವರು ಧವನ್‌ರಿಂದ ತೆರವಾದ ಸ್ಥಾನ ತುಂಬುವ ನಿರೀಕ್ಷೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News