ಶಿವಮೊಗ್ಗದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: ಮೂವರು ಮೃತ್ಯು

Update: 2019-06-19 11:55 GMT

ಶಿವಮೊಗ್ಗ, ಜೂ.19: ಜಿಲ್ಲೆಯ ಶಿಕಾರಿಪುರ ಹಾಗೂ ಶಿವಮೊಗ್ಗ ತಾಲೂಕಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಶಿಕಾರಿಪುರ ವರದಿ: ಪಟ್ಟಣದ ಸಾಲೂರು ರಸ್ತೆಯ ಮೆಟ್ರಿಕ್‍ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಎದುರಿನ ರಸ್ತೆಯಲ್ಲಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ನಾಗಪ್ಪ ಹಾಗೂ ಶೇಖರಪ್ಪ ಎಂಬುವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪಿಕಪ್ ವಾಹನ ಚಾಲಕ ಸೇರಿ ಅದರಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಶಿವಮೊಗ್ಗ ವರದಿ: ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಸುತ್ತುಕೋಟೆ ಗ್ರಾಮದ ಸವಳಂಗ-ಶಿವಮೊಗ್ಗ ರಸ್ತೆಯಲ್ಲಿ ಲಾರಿ ಹಾಗೂ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಕಾರಿನಲ್ಲಿದ್ದ ನ್ಯಾಮತಿ ಬಳಿಯ ಗುಡ್ಡಳ್ಳಿಯ ನಿವಾಸಿ ವೀರನಗೌಡ ಎಂಬುವರು ಮೃತಪಟ್ಟಿದ್ದಾರೆ. ಕಾರು ಚಾಲಕ ಮಂಜುನಾಥ್ ಎಂಬುವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News