ಎಲ್ಲಾ ತಾಲೂಕು ವ್ಯಾಪ್ತಿಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಜಾಗ ಗುರುತಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ

Update: 2019-06-19 12:07 GMT

ಚಿಕ್ಕಮಗಳೂರು, ಜೂ.19: ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಬುಧವಾರ ನಡೆದ ಕೈಗಾರಿಕೆ ಇಲಾಖೆಯ ಪ್ರಸಕ್ತ ಸಾಲಿನ ಪ್ರಥಮ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದಿನ ಸಭೆಯ ನಿರ್ಣಯಗಳ ಬಗ್ಗೆ ಯಾವುದೇ ಕ್ರಮಕೈಗೊಳ್ಳದಿರುವ ಬಗ್ಗೆ ಕಡೂರು ತಹಸೀಲ್ದಾರ್ ಹಾಗೂ ಕೈಗಾರಿಕಾ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳು ಇನ್ನು ಮುಂದೆ ಈಗಾಗದಂತೆ ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.

ಅಧಿಕಾರಿಗಳು ಕಾಟಾಚಾರದ ಸಭೆಗಳನ್ನು ಆಯೋಜಿಸುವುದನ್ನು ಬಿಟ್ಟು ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಉತ್ತಮ ವಾತಾವರಣವನ್ನು ನಿರ್ಮಾಣ ಮಾಡುವಂತ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಲು ಎಲ್ಲಾ ಅಧಿಕಾರಿಗಳು ಮುಂದಾಗಬೇಕು. ಚಿಕ್ಕಮಗಳೂರು ತಾಲೂಕು ಲಕ್ಯಾ ಗ್ರಾಮದ ಸ.ನಂ.116/1 ರಲ್ಲಿ5.33 ಎಕರೆ ಹಾಗೂ 117 ರಲ್ಲಿ ಸರ್ಕಾರಿ ಜಮೀನು ಇರುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳು ಗಮನ ಹರಿಸಬೇಕು. ಸಖರಾಯಪಟ್ಟಣದ ಸ.ನಂ.42 ರಲ್ಲಿ 24.22 ಎಕರೆ, 43 ರಲ್ಲಿ 23.27 ಹಾಗೂ 44 ರಲ್ಲಿ 16.12 ಎಕರೆ ಈ ಬಗ್ಗೆ ಪ್ರಸ್ತಾವ ಕೆ.ಐ.ಎ.ಡಿ.ಬಿ ಸಲ್ಲಿಸಲು ಇದುವರಿಗೆ ಕ್ರಮಕೈಗೊಂಡಿಲ್ಲ. ಈ ಬಗ್ಗೆ ಅಧಿಕಾರಿಗಳು ತುರ್ತು ನಿಗಾವಹಿಸಿ ಎಂದು ಸೂಚಿಸಿದರು.

ಸಮಿತಿಯಲ್ಲಿರುವ ಎಲ್ಲಾ ಅಧಿಕಾರಿಗಳು ಸಭೆಗೆ ತಾವೆ ಖುದ್ದು ಹಾಜರಾಗಬೇಕು. ಅಧೀನ ಸಿಬ್ಬಂದಿಯನ್ನು ಮುಂದಿನ ಸಭೆಗೆ ಕಳುಹಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದ ಅವರು, ಕೈಗಾರಿಕಾ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಹಾಗೂ ಮುತುವರ್ಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಮುಂದಿನ ಸಭೆಯೊಳಗೆ ಜಿಲ್ಲೆಯಲ್ಲಿ ಕೈಗಾರಿಕಾ ವಸಹಾತುಗಳನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸುಮಾರು 200-500 ಎಕರೆ ಸೂಕ್ತ ಜಾಗ ಗುರುತಿಸುವ ಮೂಲಕ ಕೈಗಾರಿಕಾ ಅಭಿವೃದ್ಧಿಗೆ ಮುಂದಾಗಬೇಕು ಎಂದರು. ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಗಣೇಶ್ ಹಾಗೂ ತಾಲೂಕು ತಹಶೀಲ್ದಾರ್ ಮತ್ತಿತರರ ಅನುಷ್ಠಾನಾಧಿಕಾರಿಗಳು ಉಪಸ್ಥಿರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News