ಮಾಧ್ಯಮ ತರಬೇತಿ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Update: 2019-06-19 15:11 GMT

ಮಂಗಳೂರು, ಜೂ.19: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಂಗಳೂರು ಕಚೇರಿಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ ಮತ್ತು ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಮಹಿಳಾ ಅಭ್ಯರ್ಥಿಗಳಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ನೇಮಿಸಲಾಗುವುದು.

ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಆಯಾ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಆಯಾ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ಸಿಗದಿದ್ದಲ್ಲಿ ಅಕ್ಕಪಕ್ಕದ ಜಿಲ್ಲೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ‘ಮಹಿಳಾ ಉದ್ದೇಶಿತ ಆಯವ್ಯಯದಡಿ ಮಹಿಳಾ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ’ ಎಂದು ನಮೂದಿಸಿರಬೇಕು. ಆಯ್ಕೆಯಾದವರಿಗೆ ಮಾಸಿಕ 15 ಸಾವಿರ ರೂ. ಗೌರವಧನ ನೀಡಲಾಗುವುದು. ಇಲಾಖೆಯ ಕ್ಷೇತ್ರಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಒಂಬತ್ತು ತಿಂಗಳುಗಳ ಕಾಲ ಕಾರ್ಯ ನಿರ್ವಹಿಸಬೇಕಾಗುತ್ತದೆ.

ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಜುಲೈ 4 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2ನೇ ಮಹಡಿ, ಪಿಡಬ್ಲ್ಯುಡಿ ಕಟ್ಟಡ, ನೆಹರೂ ಮೈದಾನ ಎದುರು, ಮಂಗಳೂರು (ದೂ.0824- 2424254)ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News