ಕುಳಾಯಿ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Update: 2019-06-19 15:28 GMT

ಮಂಗಳೂರು, ಜೂ.19: ಕುಳಾಯಿ ಗ್ರಾಮದ ಮಹಿಳಾ ಮಂಡಲದ ಕಂಪೌಂಡ್ ಹಿಂಭಾಗದಲ್ಲಿ ಸುಮಾರು 45-50 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ.

ಮೃತ ವ್ಯಕ್ತಿಯು ಕಳೆದ ಎರಡು ತಿಂಗಳಿಂದ ಕುಳಾಯಿ ಪರಿಸರದಲ್ಲಿ ಓಡಾಡಿಕೊಂಡು ಭಿಕ್ಷೆ ಬೇಡುತ್ತಿದ್ದ. ಬಂದ ಹಣದಿಂದ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣದಿಂದ ಅಥವಾ ಇನ್ನಾವುದೋ ಕಾರಣದಿಂದ ಕುಳಿತಲ್ಲಿಯೇ ಬಿದ್ದು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಚಹರೆ: ಸುಮಾರು 5 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ (ಯುಡಿಆರ್) ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News