ದ್ವಿತೀಯ ವರ್ಷದ ಸರಕಾರಿ, ಅನುದಾನಿತ ಪಾಲಿಟೆಕ್ನಿಕ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2019-06-19 17:14 GMT

ಉಡುಪಿ, ಜೂ.19: 2019-20ನೇ ಸಾಲಿಗೆ ರಾಜ್ಯದ ಸರಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ದ್ವಿತೀಯ ವರ್ಷದ ಐಟಿಐ/ದ್ವಿತೀಯ ಪಿಯುಸಿ (ವಿಜ್ಞಾನ) ಹಾಗೂ ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ ಅ್ಯರ್ಥಿಗಳಿಂದ ಲ್ಯಾಟರಲ್ ಎಂಟರಿ ಸ್ಕೀಂ ಮುಖಾಂತರ 2ನೇ ವರ್ಷಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್-www.dte.kar.nic.in-ನಲ್ಲಿ ಡೌನ್‌ಲೋಡ್ ಮಾಡಿ ಕೊಳ್ಳಲು ಮತ್ತು ಸ್ವೀಕರಿಸಲು ಜೂ.29 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿ ಗಾಗಿ ಸರಕಾರಿ ಪಾಲಿಟೆಕ್ನಿಕ್‌ನ ಉಡುಪಿ ಸಂಸ್ಥೆಯ ಪ್ರಾಚಾರ್ಯರ ದೂರವಾಣಿ ಸಂಖ್ಯೆ: 0820-2570244ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News