49ನೇ ಜನ್ಮ ದಿನ ಆಚರಿಸಿಕೊಂಡ ರಾಹುಲ್ ಗಾಂಧಿ: ಪ್ರಧಾನಿ ನರೇಂದ್ರ ಮೋದಿ, ನಾಯಕರಿಂದ ಅಭಿನಂದನೆ

Update: 2019-06-19 17:19 GMT

ಹೊಸದಿಲ್ಲಿ, ಜೂ. 19: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ 49ನೇ ವರ್ಷಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿ ಅವರನ್ನು ಅಭಿನಂದಿಸಿದ್ದಾರೆ ಹಾಗೂ ಉತ್ತಮ ಆಯುರಾರೋಗ್ಯ ದೊರಕಲೆಂದು ಹಾರೈಸಿದ್ದಾರೆ.

 ‘‘ಶ್ರೀ ರಾಹುಲ್ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಷಯಗಳು. ನಿಮಗೆ ದೇವರು ದೀರ್ಘಕಾಲ ಆಯುಷ್ಯ, ಆರೋಗ್ಯ ನೀಡಲಿ’’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಪ್ರತಿ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ‘‘ಅಭಿನಂದಿಸಿರುವುದಕ್ಕೆ ಕೃತಜ್ಞತೆ ನರೇಂದ್ರ ಮೋದಿ ಅವರೇ. ನಾನು ನಿಮ್ಮನ್ನು ಮೆಚ್ಚುತ್ತೇನೆ’’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್‌ನ ಹಲವು ನಾಯಕರು ರಾಹುಲ್ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಪಕ್ಷದ ಕಚೇರಿಗೆ ಆಗಮಿಸಿದ ನಾಯಕರು ರಾಹುಲ್ ಗಾಂಧಿ ಅವರಿಗೆ ಶುಭಾಶಯ ಕೋರಿದರು. ‘‘ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹುಟ್ಟು ಹಬ್ಬದ ಅಭಿನಂದನೆ ಸಲ್ಲಿಸಲಾಯಿತು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಾಜ್ಯ ಸಭೆಯ ಪ್ರತಿಪಕ್ಷದ ನಾಯಕ ಶ್ರೀ ಗುಲಾಂ ನಬಿ ಆಝಾದ್, ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕ ಗಾಂಧಿ, ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು’’ ಎಂದು ಕಾಂಗ್ರೆಸ್ ಪಕ್ಷ ಟ್ವೀಟ್‌ನಲ್ಲಿ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News