ಜೂ.21ಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರಗೋಷ್ಟಿ

Update: 2019-06-19 18:11 GMT

ಬೆಂಗಳೂರು, ಜೂ.18: ಬೆಂಗಳೂರು ವಿಶ್ವವಿದ್ಯಾಲಯವು ಜೂ.21 ರಂದು ಜ್ಞಾನಭಾರತಿ ಆವರಣದ ಸೆನೆಟ್ ಹಾಲ್‌ನಲ್ಲಿ ಬೆಳಗ್ಗೆ 11ಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ವಿಚಾರಗೋಷ್ಟಿಯನ್ನು ಆಯೋಜಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿ ಸದಸ್ಯ ಪ್ರೊ.ಎಂ.ಕೆ. ಶ್ರೀಧರ್ ಪ್ರಧಾನ ಭಾಷಣ ಮಾಡಲಿದ್ದಾರೆ. ರಾಮಯ್ಯ ಸಾರ್ವಜನಿಕ ನೀತಿ ಕೇಂದ್ರದ ಉಪ ನಿರ್ದೇಶಕ ಚೇತನ್ ಸಿಂಘೈ ಅವರು ಕರಡು ನೀತಿಯನ್ನು ಮಂಡಿಸಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್.ವೇಣುಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ ಪ್ರೊ.ಬಿ.ಕೆ. ರವಿ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪ್ರತಿಯೊಬ್ಬರಿಗೂ ಉನ್ನತ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ನಮ್ಮ ದೇಶವನ್ನು ಸಮಂಜಸ ಹಾಗೂ ಸ್ಪಂದನಶೀಲ ಜ್ಞಾನ ಸಮಾಜವನ್ನಾಗಿ ಪರಿವರ್ತಿಸುವ ಸಾಮರ್ಥ್ಯ ಹೊಂದಿರುವ ಭಾರತೀಯ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ಸ್ಥಾಪಿಸುವುದು ರಾಷ್ಟ್ರೀಯ ಶಿಕ್ಷಣ ನೀತಿ 2019ರ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕರಡು ಬರಹ ಸಮಿತಿಯು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಿದ್ಧಪಡಿಸಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವವರಿಗೆ ಕರಡು ನೀತಿಯ ಬಗ್ಗೆ ಅರಿವು ಮೂಡಿಸುವ ಮೂಲಕ ಅದನ್ನು ಇನ್ನಷ್ಟು ಸಮರ್ಥವನ್ನಾಗಿ ರೂಪಿಸಲು ವಿಚಾರಗೋಷ್ಟಿಯನ್ನು ಆಯೋಜಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News