ಖಾಸಗಿ ವಿವಿಗಳ ಕಾರ್ಯವಿಧಾನ ಅಧ್ಯಯನಕ್ಕೆ ಸಮಿತಿ ರಚನೆ

Update: 2019-06-19 18:13 GMT

ಬೆಂಗಳೂರು, ಜೂ.19: ಉನ್ನತ ಶಿಕ್ಷಣ ಇಲಾಖೆಯಿಂದ ಖಾಸಗಿ ವಿಶ್ವವಿದ್ಯಾಲಯಗಳ ಕಾರ್ಯವಿಧಾನಗಳ ಬಗ್ಗೆ ಅಧ್ಯಯನ ನಡೆಸುವ ಸಲುವಾಗಿ ಪರಿಣಿತರ ಸಮಿತಿಯೊಂದನ್ನು ರಚನೆ ಮಾಡಿದೆ.

ರಾಜ್ಯದ ಹಲವು ಖಾಸಗಿ ವಿವಿಗಳು ಪ್ರವೇಶ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಪಾಲಿಸುತ್ತಿಲ್ಲ. ಸಿಬ್ಬಂದಿ ನೇಮಕದಲ್ಲಿ ರೋಸ್ಟರ್ ಪದ್ಧತಿಯನ್ನು ಇಟ್ಟುಕೊಳ್ಳುವುದಿಲ್ಲ. ರ್ಯಾಗಿಂಗ್ ಕಿರುಕುಳ ತಡೆಗಟ್ಟುತ್ತಿಲ್ಲ ಸೇರಿದಂತೆ ಹಲವು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಕ್ರಮಕ್ಕೆ ಮುಂದಾಗಿದೆ. ಹೀಗಾಗಿ, ಸಮಿತಿ ನೇಮಿಸಿದ್ದು, ಅದು ಎಲ್ಲ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ ಮುಂದಿನ ಕ್ರಮಕ್ಕಾಗಿ ಸರಕಾರಕ್ಕೆ ವರದಿ ಸಲ್ಲಿಸಲಿದೆ.

ಅಲಯನ್ಸ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ಡಿ.ಅಯ್ಯಪ್ಪಸಮಿತಿಯ ನೇತೃತ್ವ ವಹಿಸಲಿದ್ದು, ಒಟ್ಟು 18 ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಲಿದೆ. ಮೊದಲ ಹಂತದಲ್ಲಿ 11 ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಲಿದೆ. ವಿಧಾನಮಂಡಲ ಅಧಿವೇಶನಗಳಲ್ಲೇ ಖಾಸಗಿ ವಿಶ್ವವಿದ್ಯಾಲಯಗಳು ನಿಯಮ ಉಲ್ಲಂಘಿಸುವ ಬಗ್ಗೆ ಚರ್ಚೆಗಳು ನಡೆದಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News